ಬಾಲ್ಯ ವಿವಾಹ ನಿಷೇಧ ಕಾಯ್ದೆಯ ನಿಬಂಧನೆ ಉಲ್ಲಂಘನೆ: ಅಸ್ಸಾಂನಲ್ಲಿ 1,800 ಕ್ಕೂ ಹೆಚ್ಚು ಜನರ ಬಂಧನ

Update: 2023-02-03 08:15 GMT

ಗುವಾಹಟಿ: ಅಸ್ಸಾಂನಲ್ಲಿ ಇದುವರೆಗೆ ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ  ಬಾಲ್ಯವಿವಾಹ ನಿಷೇಧ ಕಾಯ್ದೆಯ ನಿಬಂಧನೆ ಉಲ್ಲಂಘನೆ ಆರೋಪದಲ್ಲಿ 1,800 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma)ಇಂದು ತಿಳಿಸಿದ್ದಾರೆ.

ಮುಂಜಾನೆಯಿಂದಲೇ ಕಾರ್ಯಾಚರಣೆ ಆರಂಭಗೊಂಡಿದ್ದು, ಮುಂದಿನ ದಿನಗಳಲ್ಲಿ ಇದು ಮುಂದುವರಿಯಲಿದೆ ಎಂದರು.

"ಶೂನ್ಯ ಸಹಿಷ್ಣುತೆಯ ಮನೋಭಾವ" ದಿಂದ ಈ ಬಾಲ್ಯ ವಿವಾಹದ  ವಿರುದ್ಧ ಕ್ರಮ ಕೈಗೊಳ್ಳುವಂತೆ ಅಸ್ಸಾಂ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಬಾಲ್ಯವಿವಾಹ ನಿಷೇಧ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಸ್ತುತ ರಾಜ್ಯಾದ್ಯಂತ ಬಂಧನಗಳು ನಡೆಯುತ್ತಿವೆ. ಇದುವರೆಗೆ 1,800ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಮಹಿಳೆಯರ ಮೇಲಿನ ಅಕ್ಷಮ್ಯ ಹಾಗೂ  ಘೋರ ಅಪರಾಧದ ವಿರುದ್ಧ ಶೂನ್ಯ ಸಹಿಷ್ಣುತೆಯ ಮನೋಭಾವದಿಂದ ವರ್ತಿಸುವಂತೆ ನಾನು ಅಸ್ಸಾಂ ಪೊಲೀಸರನ್ನುಕೇಳಿಕೊಂಡಿದ್ದೇನೆ" ಎಂದು ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದಾರೆ.

ಹದಿನೈದು ದಿನಗಳೊಳಗೆ ಅಸ್ಸಾಂನಾದ್ಯಂತ ದಾಖಲಾದ 4,000 ಕ್ಕೂ ಹೆಚ್ಚು ಬಾಲ್ಯ ವಿವಾಹ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಗುರುವಾರ ತಿಳಿಸಿದ್ದರು, ಶುಕ್ರವಾರದಿಂದ ಶಿಸ್ತುಕ್ರಮ ಆರಂಭವಾಗಲಿದೆ ಎಂದು ಘೋಷಿಸಿದರು.

Similar News