'ಕುಟುಂಬ ನಿರ್ವಹಣೆಗೆ ತೊಂದರೆ ಆಗುತ್ತಿದೆ': ವೇತನ ಹೆಚ್ಚಿಸಲು ಶುಶ್ರೂಷಕರ ಆಗ್ರಹ

Update: 2023-02-03 15:09 GMT

ಬೆಂಗಳೂರು, ಫೆ.3: ರಾಜ್ಯದಲ್ಲಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಶುಶ್ರೂಷಕರ ವೇತನವನ್ನು ಹೆಚ್ಚಿಸಬೇಕು ಎಂದು ಕರ್ನಾಟಕ ಶುಶ್ರೂಷಕರ ಕ್ಷೇಮಾಭಿವೃದ್ಧಿ ಸಂಘವು ಒತ್ತಾಯಿಸಿದೆ.

ಶುಕ್ರವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಘದ ಪ್ರತಿನಿಧಿ ಎಂ.ಎಂ. ಲೋಕಾಪುರಿ, ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕರ್ನಾಟಕ ರಾಜ್ಯಾದ್ಯಂತ 9 ಸಾವಿರ ಶುಶ್ರೂಷಕರು ಕಾರ್ಯನಿರ್ವಹಿಸುತ್ತಿದ್ದು, ಕೇವಲ 13 ಸಾವಿರ ರೂ. ಸಂಬಳ ಬರುತ್ತಿದೆ. ಈ ಕನಿಷ್ಠ ವೇತನವೂ ಮೂರ್ನಾಲ್ಕು ತಿಂಗಳಿಗೊಮ್ಮ ಪಾವತಿ ಆಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆಗೆ ತೊಂದರೆ ಆಗುತ್ತಿದೆ ಎಂದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಎಚ್ಚರಿಕೆಯನ್ನು ವಹಿಸಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಶುಶ್ರೂಕಿಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ನೀಡುವಂತಹ ಬಜೆಟ್ ಅನ್ನು ಮಂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮೀನಾಕ್ಷಿ ಮಾನೆ ಮತ್ತಿತರರು ಉಪಸ್ಥಿತರಿದ್ದರು.   

Similar News