×
Ad

ಕ್ಯಾನ್ಸರ್ ಗೆಲ್ಲಬಹುದು

ಇಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನ

Update: 2023-02-04 08:02 IST

ಕ್ಯಾನ್ಸರ್ (ಅರ್ಬುದ) ರೋಗ ಮಾನವಕುಲದ ಬಹುದೊಡ್ಡ ಶತ್ರು. ಅನಾದಿ ಕಾಲದಿಂದಲೂ ಈ ರೋಗ ಮನುಷ್ಯರನ್ನು ಕಾಡುತ್ತಿದೆ. 

ಕ್ಯಾನ್ಸರ್ ರೋಗ ಅಂದ ಕೂಡಲೇ ನಾವೆಲ್ಲಾ ಒಮ್ಮೆಲೇ ದಿಗಿಲುಗೊಳ್ಳುತ್ತೇವೆ. ಹಿಂದೆಲ್ಲ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪರಿಣಿತ ವೈದ್ಯರ ಸೇವೆ ದುರ್ಲಬವಾಗಿತ್ತು. ಬಡತನ, ಅನಕ್ಷರತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ರೋಗವನ್ನು ಪತ್ತೆ ಹಚ್ಚುವ ಹೊತ್ತಿಗೆ ಪರಿಸ್ಥಿತಿ ಕೈಮೀರಿ ಹೋಗಿರುತ್ತಿತ್ತು. ಆ ಕಾರಣದಿಂದಲೇ ಕ್ಯಾನ್ಸರ್ ಗುಣಪಡಿಸಲಾಗದ ಕಾಯಿಲೆ ಎಂಬ ಹಣೆಪಟ್ಟಿ ಪಡೆದು ಕೊಂಡಿತು. ಆದರೆ ತಂತ್ರಜ್ಞಾನ ಪರಿಣಿತ ವೈದ್ಯರ ಲಭ್ಯತೆ ಮತ್ತು ಜನರ ತಿಳುವಳಿಕೆಯ ಮಟ್ಟ ಏರಿದಂತೆ ಜನರಲ್ಲಿ ಅರ್ಬುದ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡತೊಡಗಿದೆ ಮತ್ತು ಈಗಿನ ಕಾಲಘಟ್ಟದಲ್ಲಿ ಕ್ಯಾನ್ಸರ್ ಖಂಡಿತವಾಗಿಯೂ ಗುಣಪಡಿಸಲಾಗದ ಕಾಯಿಲೆಯಲ್ಲ. ಪ್ರಾರಂಭಿಕ ಹಂತದಲ್ಲಿ ಗುರುತಿಸಿದಲ್ಲಿ ಪರಿಣಾಮಕಾರಿ ಔಷಧಿ, ಚಿಕಿತ್ಸೆ ನೀಡಿ ಸಂಪೂರ್ಣವಾಗಿ ಗುಣಮುಖವಾಗಬಹುದು. 

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ರೋಗವನ್ನು ಗೆದ್ದು ಸುಖ ಜೀವನ ನಡೆಸುವವರ ಸಂಖ್ಯೆ ಹೆಚ್ಚುತ್ತಿದೆ ಎನ್ನುವುದು ಸಮಾಧಾನಕರ ಅಂಶ. ಆದರೂ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮತ್ತು ಅರಿವು ಮೂಡಿಸುವ ಪ್ರಯತ್ನ ನಡೆಯಬೇಕಾಗಿದೆ. ಯಾಕೆಂದರೆ ಹಿಂದಿನ ಕಾಲದಲ್ಲಿ ಕ್ಯಾನ್ಸರ್ ಇಳಿ ವಯಸ್ಸಿನ ರೋಗವಾಗಿತ್ತು. 60-70ರ ಹರೆಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ರೋಗ, ಈಗೀಗ 30-40 ಹರೆಯದಲ್ಲಿ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ವಿಚಾರ. 

ಕ್ಯಾನ್ಸರ್ ರೋಗದ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಸಲುವಾಗಿ 2008ರಿಂದ ಪ್ರತೀ ವರ್ಷ ಫೆಬ್ರವರಿ 4ರಂದು ಜಾಗತಿಕ ಕ್ಯಾನ್ಸರ್ ದಿನ ಎಂದು ಆಚರಿಸಲಾಗುತ್ತದೆ. ಪ್ರಾರಂಭಿಕ ಹಂತದಲ್ಲಿಯೇ ರೋಗವನ್ನು ಪತ್ತೆ ಹಚ್ಚುವುದು ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡುವುದು ಈ ಆಚರಣೆಯ ಮೂಲ ಉದ್ದೇಶ. ಒಟ್ಟಿನಲ್ಲಿ ಜನಸಾಮಾನ್ಯರಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಿ ಕ್ಯಾನ್ಸರ್ ರೋಗ ಮಾರಣಾಂತಿಕ ಅಲ್ಲ ಎಂಬ ಸಂದೇಶವನ್ನು ಸಾರುವ ಸದುದ್ದೇಶ ಆಚರಣೆಯ ಹಿಂದೆ ಇದೆ. 

ಕೆಲವೊಮ್ಮೆ ರೋಗಕ್ಕಿಂತ ರೋಗದ ಬಗೆಗಿನ ತಪ್ಪುಕಲ್ಪನೆಯಿಂದಾಗಿ ಹಲವಾರು ವೈಯಕ್ತಿಕ, ಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ನಾಂದಿ ಹಾಡಿ ಅಮೂಲ್ಯ ಜೀವ ಅಕಾಲಿಕ ಸಾವಿನಲ್ಲಿ ಅಂತ್ಯವಾಗುವ ಸಾ ಧ್ಯತೆಯೂ ಇದೆ. ಇದಕ್ಕಾಗಿಯೇ ರೋಗದ ಬಗ್ಗೆ ಜಾಗೃತಿ ಮೂಡಿಸುವ ಗುರುತರ ಜವಾಬ್ದಾರಿ ವೈದ್ಯರ ಮೇಲೆ ಇದೆ ಎಂದರೂ ತಪ್ಪಲ್ಲ. 2022ರಿಂದ 2024ರವರೆಗೆ 'Close the Care Gap'  ಎಂಬ ಧ್ಯೇಯ ವಾಕ್ಯ ಎಲ್ಲರಿಗೂ, ಎಲ್ಲೆಡೆ, ಎಲ್ಲಾ ರೀತಿಯ ಪರಿಪೂರ್ಣ ಕ್ಯಾನ್ಸರ್ ಚಿಕಿತ್ಸೆ ಸಿಗುವಂತಾಗಿ ಪೂರ್ಣ ಗುಣ ಮುಖರಾಗಲಿ ಎಂಬುದಾಗಿದೆ. ಬಡವ ಬಲ್ಲಿದ ಭೇದವಿಲ್ಲದೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕಿಸುವ ಸದುದ್ದೇಶವನ್ನು ಈ ಆಚರಣೆ ಹೊಂದಿದೆ.

ಕ್ಯಾನ್ಸರ್ ರೋಗಕ್ಕೆ ಕಾರಣಗಳು 
1. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆ 
2. ಧೂಮಪಾನ ಮತ್ತು ಮದ್ಯಪಾನ
3. ಆನುವಂಶೀಯ ಕಾರಣಗಳು
4. ಆರಾಮದಾಯಕ ಜೀವನ ಶೈಲಿ, ಅನಾರೋಗ್ಯಪೂರ್ಣ ಆಹಾರದ ಪದ್ಧತಿ ಮತ್ತು ಒತ್ತಡದ ಜೀವನ ಇತ್ಯಾದಿ
5. ವಿಕಿರಣದ ಮುಖಾಂತರ
6. ಅತಿಯಾದ ಗ‘ರ್ನಿರೋ‘ಕ ಮಾತ್ರೆಗಳು ಮತ್ತು ಕೃತಕ ರಸದೂತ ಮಾತ್ರೆಗಳ  ಅನಿಯಂತ್ರಿತ ಬಳಕೆ
7. ವಾತಾವರಣದ ವೈಪರೀತ್ಯ, ವಾಯು ಮಾಲಿನ್ಯ, ವೃತ್ತಿ ಸಂಬಂಧಿ ಕ್ಯಾನ್ಸರ್ ಕಾರಕ ವಸ್ತುಗಳ ದೇಹಕ್ಕೆ ಸೇರುವುದರಿಂದ 
8. ಅನಾರೋಗ್ಯಕರವಾದ ಲೈಂಗಿಕ ಜೀವನ ಮತ್ತು ಹತ್ತು ಹಲವಾರು ಲೈಂಗಿಕ ಸಂಬಂ‘ಗಳು, ಹಲವಾರು ಬಾರಿ ಗ‘ರ್‘ರಿಸುವುದು ಇತ್ಯಾದಿ. 
9. ಹೆಪಟೈಟಿಸ್ ಬಿ ಮತ್ತು ಸಿ ವೈರಸ್‌ನ ಸೋಂಕು, ಎಬ್‌ಸ್ಟೆ‘ನ್ ಬಾರ್ ವೈರಸ್, ಹ್ಯೂಮನ್ ಪಾಪಿಲೋಮ ವೈರಸ್ ಇತ್ಯಾದಿ ವೈರಸ್ ಸೋಂಕಿನಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ.

ಕ್ಯಾನ್ಸರ್ ತಡೆಗಟ್ಟುವುದು ಹೇಗೆ?

 ತಂಬಾಕು ಮತ್ತು ತಂಬಾಕು ಉತ್ಪನ್ನಗಳನ್ನು ವರ್ಜಿಸಬೇಕು. ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳನ್ನು ಯಾವುದೇ ರೂಪದಲ್ಲಿ ಉಪಯೋಗಿಸಬಾರದು. 
 ಧೂಮಪಾನ ಖಂಡಿತವಾಗಿಯೂ ಕ್ಯಾನ್ಸರ್ ರೋಗಕ್ಕೆ ಪೂರಕ. ಧೂಮಪಾನ ಮಾಡುವ ಶೇ.70 ಮಂದಿ ಶ್ವಾಸಕೋಶದ ಕ್ಯಾನ್ಸರಿಗೆ ತುತ್ತಾಗುತ್ತಾರೆ ಎನ್ನುವ ವರದಿಯಿದೆ.
 ಮದ್ಯಪಾನ ಕೂಡಾ ವರ್ಜಿಸಬೇಕು. ಧೂಮಪಾನ, ಮದ್ಯಪಾನ ಮತ್ತು ತಂಬಾಕು ಜಗಿಯುವುದು ಈ ಮೂರು ಕೂಡ ಮನುಷ್ಯಕುಲದ ಬಹುದೊಡ್ಡ ವೈರಿ. ಇವು ಮೂರು ಚಟಗಳು ಒಟ್ಟು ಸೇರಿದಲ್ಲಿ ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ. 
 ಕೆಲವೊಂದು ಕ್ಯಾನ್ಸರ್ (ವೃಷಣದ ಕ್ಯಾನ್ಸರ್, ಸ್ತನ ಕ್ಯಾನ್ಸರ್) ಆನುವಂಶೀಯವಾಗಿ ಬರುತ್ತದೆ. ಈ ರೀತಿಯ ಚರಿತ್ರೆ ಯುಳ್ಳವರು ಕಾಲಕಾಲಕ್ಕೆ ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕು.
 ಅತಿಯಾದ ರಸದೂತಗಳ ಬಳಕೆ ಮತ್ತು ಅತಿಯಾದ ಗರ್ಭನಿರೋಧಕ ಬಳಕೆ, ಅನಾರೋಗ್ಯಕರ ಲೈಂಗಿಕ ಪ್ರಕ್ರಿಯೆಗಳು ಮತ್ತು ಸಂಬಂ‘ಗಳಿಗೆ ಕಡಿವಾಣ ಹಾಕಬೇಕು.
 ಸಮತೋಲಿನ ಆಹಾರ ಮತ್ತು ದೈಹಿಕ ವ್ಯಾಯಾಮಗಳಿಂದ ಕೂಡಿದ ಆರೋಗ್ಯಕರವಾದ ಜೀವನ ಕ್ರಮ ಅಳವಡಿಸಿಕೊಳ್ಳಬೇಕು. ಕಲುಷಿತ ವಾತಾವರಣ, ಕಲುಷಿತ ಆಹಾರ, ನೀರು ಇತ್ಯಾದಿಗಳಿಂದಲೂ ಕ್ಯಾನ್ಸರ್ ಬರಬಹುದು. ವಿಕಿರಣ ಸೂಸುವ ವಾತಾವರಣ ಮತ್ತು ವೃತ್ತಿ ಸಂಬಂಧಿ ಕ್ಯಾನ್ಸರ್‌ಕಾರಕ (ಸೀಸದ ಕಾರ್ಖಾನೆ, ಸಿಮೆಂಟ್ ಕಾರ್ಖಾನೆ) ವಾತಾವರಣವಿದ್ದಲ್ಲಿ ಕ್ಯಾನ್ಸರ್ ಬರದಂತೆ ಎಚ್ಚರ ವಹಿಸಬೇಕು.
 ಕಾಲಕಾಲಕ್ಕೆ ವೈದ್ಯರ ಬಳಿ ನಿಯಮಿತವಾಗಿ ಪರೀಕ್ಷೆ ಮಾಡಿಸಿಕೊಂಡಲ್ಲಿ ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಸರ್ವಿಕ್ಸ್ ಕ್ಯಾನ್ಸರ್ ಮತ್ತು ಇನ್ನಾವುದೇ ಕ್ಯಾನ್ಸರ್ ರೋಗವನ್ನು  ಆರಂಭಿಕ ಹಂತದಲ್ಲಿ ಪತ್ತೆಹಚ್ಚಬಹುದು.

ಬಾಯಿ ಕ್ಯಾನ್ಸರ್‌ನ ಚಿಹ್ನೆಗಳು

  • ಪ್ರಾರಂಭಿಕ ಹಂತದಲ್ಲಿ ಖಾರ ಆಹಾರ ಪದಾರ್ಥಗಳನ್ನು ತಿನ್ನುವಾಗ ಬಾಯಿ ಉರಿಯುತ್ತದೆ. 
  • ಬಾಯಿಯಲ್ಲಿ ಹುಣ್ಣು ಅಥವಾ ಗಾಯ ಆಗುತ್ತದೆ ಮತ್ತು ಹುಣ್ಣು ಒಣಗುವುದೇ ಇಲ್ಲ
  • ಬಾಯಿಯಲ್ಲಿ ಗಡ್ಡೆ ಬೆಳೆಯುತ್ತದೆ ಮತ್ತು ಮುಟ್ಟಿದಾಗ ರಕ್ತ ಬರುತ್ತದೆ.
  • ವಿಪರೀತ ನೋವು ಇರುತ್ತದೆ. ಮಾತ್ರೆ ತಿಂದರೂ ನೋವು ನಿವಾರಣೆಯಾಗುವುದಿಲ್ಲ.
  • ಬಾಯಿ ತೆರೆಯಲು ಕಷ್ಟವಾಗಬಹುದು. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿ 50 ಮಿ.ಮೀ. ಬಾಯಿ ತೆರೆಯಬಹುದು. ಅರ್ಬುದ ರೋಗದಲ್ಲಿ 20 ಮಿ.ಮೀ.ಗಿಂತ ಜಾಸ್ತಿ ಬಾಯಿ ತೆರೆಯಲು ಕಷ್ಟವಾಗಬಹುದು. 
  • ಬಾಯಿಯಲ್ಲಿ ಬಿಳಿ ಮತ್ತು ಕೆಂಪುಕಲೆಗಳು ಕಾಣಿಸಿಕೊಳ್ಳಬಹುದು. 
  • ನಾಲಗೆಯ ಮೇಲೆ ಗುಳ್ಳೆ ಅಥವಾ ಹುಣ್ಣು ಅಥವಾ ಗಡ್ಡೆಬೆಳೆದು ನಾಲಗೆಯ ಚಲನೆಯಲ್ಲಿ ಕಷ್ಟವಾಗಬಹುದು
  • ಅತಿಯಾದ ಎಂಜಲು (ಜೊಲ್ಲುರಸ) ಬಂದಂತೆ ಅನಿಸುವುದು
  • ಕುತ್ತಿಗೆಯ ಸುತ್ತ ಗಡ್ಡೆ ಅಥವಾ ಗುಳ್ಳೆ ಬೆಳೆದಂತೆ ಅನಿಸಬಹುದು. ಗಡ್ಡೆ ಸುಮಾರು 2ರಿಂದ 10ರ ವರೆಗೆ ಇದ್ದು ಕಲ್ಲಿನಂತೆ ಗಟ್ಟಿಯಾಗಿರುತ್ತದೆ. ಆದರೆ ನೋವಿರುವುದಿಲ್ಲ.

ಶ್ವಾಸಕೋಶದ ಕ್ಯಾನ್ಸರ್‌ನ ಚಿಹ್ನೆಗಳು

  • ಧೂಮಪಾನ ಶ್ವಾಸಕೋಶಗಳ ಬಹುದೊಡ್ಡ ವೈರಿ. ಶೇ. 90ರಷ್ಟು ಮಂದಿ ‘ೂಮಪಾನದಿಂದಾಗಿಯೇ ಎದೆಗೂಡಿನ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ. ಪ್ರಾರಂಭಿಕ ಹಂತದಲ್ಲಿ ಹೆಚ್ಚಿನ ಲಕ್ಷಣಗಳು ಕಾಣದೇ ಇರಬಹುದು. ಆದರೆ ಮುಂದುವರಿದ ಕ್ಯಾನ್ಸರ್‌ನಲ್ಲಿ ಈ ಕೆಳಗಿನ ಲಕ್ಷಣಗಳು ಹೆಚ್ಚಾಗಿ ಕಾಣಸಿಗುತ್ತದೆ.
  • ವಿಪರೀತ ಮತ್ತು ನಿರಂತರ ಕೆಮ್ಮು. 
  • ಕೆಮ್ಮುವಾಗ ರಕ್ತ ವಸರುವುದು, ಕದ ಜೊತೆ ರಕ್ತ ಸೂಸುವುದು 
  • ಆಹಾರ ಸೇರದಿರುವುದು ಮತ್ತು ಹಸಿವಿಲ್ಲದಿರುವುದು ಇದರಿಂದಾಗಿ ದೇಹದ ತೂಕ ಕಡಿಮೆಯಾಗಬಹುದು
  • ಉಸಿರಾಡಲು ಕಷ್ಟವಾಗಬಹುದು. ಉಸಿರಾಡುವಾಗ ಜೋರಾಗಿ ಶಬ್ದ ಬರಬಹುದು. ಉಸಿರಾಡುವಾಗ ಎದೆಭಾಗದಲ್ಲಿ ನೋವಾಗಬಹುದು. ದೀರ್ಘವಾದ ಶ್ವಾಸ ತೆಗೆಯಲು ಸಾಧ್ಯವಾಗದೆ ಇರಬಹುದು 
  • ಪದೇ ಪದೇ ಆಯಾಸಗೊಳ್ಳುವುದು, ಜೀವನದಲ್ಲಿ ನಿರಾಸಕ್ತಿ, ಶ್ವಾಸಕೋಶದಲ್ಲಿ ಆಮ್ಲಜನಕದ ಪೂರೈಕೆ ಮತ್ತು ವಿನಿಮಯವಾಗದಿದ್ದಲ್ಲಿ ಜೀವನದ ಉತ್ಸಾಹ ಬತ್ತಿಹೋಗಬಹುದು. 
  • ಧ್ವನಿಯಲ್ಲಿ  ಬದಲಾವಣೆ, ಮುಖ  ಊದಿಕೊಳ್ಳುವುದು ಮತ್ತು ಕರ್ಕಶವಾದ ಧ್ವನಿ ಇತ್ಯಾದಿ ಉಂಟಾಗಬಹುದು
  • ಪದೇ ಪದೇ ಶ್ವಾಸನಾಳದ ಸೋಂಕಿಗೆ ತುತ್ತಾಗಿ ಜ್ವರ, ಕ, ಕೆಮ್ಮು ಮತ್ತು ದಮ್ಮು ಕಟ್ಟುವುದು ಹೆಚ್ಚಾಗಿ ಕಾಡಬಹುದು. 
  • ಎದೆಗೂಡಿನ ‘ಾಗದಲ್ಲಿ ನೋವು ಬರಬಹುದು. ಈ ನೋವು ತೋಳು, ಬೆನ್ನು ಮುಂತಾದ ಕಡೆಗೂ ಹರಡಬಹುದು. ಕೆಮ್ಮು ಇಲ್ಲದಿದ್ದರೂ ನಿರಂತರ ನೋವು ಇರಬಹುದು. 

ಕ್ಯಾನ್ಸರ್ ರೋಗ ಅಂತಿಮ ಹಂತಕ್ಕೆ ತಲುಪಿದಾಗ, ದೇಹದ ಬೇರೆ ಭಾಗಗಳಿಗೂ ಹರಡಿ ಮೂಳೆಗಳಲ್ಲಿ ನೋವು ಮತ್ತು ಮೂಳೆ ಮುರಿತ ಉಂಟಾಗಬಹುದು. ಅದೇ ರೀತಿ ಮೆದುಳಿಗೂ ಹರಡಿದಲ್ಲಿ ತಲೆನೋವು, ಅಪಸ್ಮಾರ, ಕೈಕಾಲುಗಳು ಸಂವೇದನೆ ಮತ್ತು ನಿಯಂತ್ರಣ ಕಳೆದು ಕೊಳ್ಳುವುದು ಇತ್ಯಾದಿಗಳು ಕಾಣಿಸಿಕೊಳ್ಳಬಹುದು. ಇಲ್ಲಿ ಕೂಡಾ ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ನೀಡಿದಲ್ಲಿ ರೋಗದ ತೀವ್ರತೆಯನ್ನು ಕಡಿಮೆ ಮಾಡಬಹುದು. ಆದರೆ ಹೆಚ್ಚಿನ ಶ್ವಾಸಕೋಸ ಕ್ಯಾನ್ಸರ್ ಕಡೆ ಹಂತದಲ್ಲಿ ಗುರುತಿಸಲ್ಪಟ್ಟು ವೈದ್ಯರ ಬಳಿ ಬರುವಾಗಲೇ ಕಾಲ ಮಿಂಚಿ ಹೋಗಿರುತ್ತದೆ.

Similar News