ರಾಯಚೂರು: ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

Update: 2023-02-04 05:12 GMT

ರಾಯಚೂರು: ಜಿಲ್ಲೆಯ ಲಿಂಗಸಗೂರು ಪಟ್ಟಣದ ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತ ದೇಹ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಲಿಂಗಸೂಗೂರು ತಾಲೂಕಿನ ಗೋನವಾಟ್ಲ ತಾಂಡಾದ ಐಶ್ವರ್ಯ (18) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿನಿ ಐಶ್ವರ್ಯ ಪ್ರಥಮ ಪಿಯು (ವಿಜ್ಞಾನ) ಓದುತ್ತಿದ್ದಳೆನ್ನಲಾಗಿದ್ದು,  ಶುಕ್ರವಾರ ಮಧ್ಯಾಹ್ನ ಅದೇ ಕಾಲೇಜಿನ ವಸತಿನಿಲಯದಲ್ಲಿ ಆಕೆಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಪ್ರಾಂಶುಪಾಲರ ವಿರುದ್ಧ ಆರೋಪ: ಕಾಲೇಜಿನ ಪ್ರಾಂಶುಪಾಲರೇ ವಿದ್ಯಾರ್ಥಿನಿಯನ್ನ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದು, ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Similar News