ಸಂಚಾರ ನಿಯಮ ಉಲ್ಲಂಘನೆ ದಂಡಕ್ಕೆ ಶೇ.50 ರಿಯಾಯಿತಿ; ದಂಡ ಪಾವತಿಸುವ ವಿಧಾನ ಇಲ್ಲಿದೆ...

Update: 2023-02-04 07:56 GMT

ಬೆಂಗಳೂರು, ಫೆ.4: ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟಲು ಬಾಕಿ ಇರುವವರು ಮತ್ತು ಪ್ರಕರಣ ಕೋರ್ಟ್‍ನಲ್ಲಿ ಇದ್ದರೆ ಅಂಥವರಿಗೆ ಶೇ.50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು, ಬಾಕಿ ಇರುವ ದಂಡ ಪಾವತಿಸುವ ಮತ್ತು ವೀಕ್ಷಿಸುವ ಕುರಿತು ಮಾಹಿತಿ ಇಲ್ಲಿದೆ.  

► ಬಾಕಿ ಇರುವ ದಂಡದ ವಿವರಗಳನ್ನು ವೀಕ್ಷಿಸುವ ಮತ್ತು ಪಾವತಿಸುವ ವಿಧಾನ

- ಬಾಕಿ ಇರುವ ದಂಡದ ವಿವರಗಳನ್ನು ವೀಕ್ಷಿಸುವ ಮತ್ತು ಪಾವತಿಸುವ ವಿಧಾನ :ಕರ್ನಾಟಕ ಒನ್‌ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.

- ಪೇ ಟಿಎಂ ಆಪ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.

- ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಯಬಹುದಾಗಿರುತ್ತದೆ.

- ದಂಡವನ್ನು ಮೊತ್ತವನ್ನು ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.

- ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ಪಾವತಿಸಬಹುದಾಗಿದೆ

ಯಾವುದಾದರೂ ಸಂಚಾರ ನಿಯಮ ಉಲ್ಲಂಘನೆಯ ದಂಡವು ಬಾಕಿ ಇದ್ದಲ್ಲಿ ಕೂಡಲೇ ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22942883, ಅಥವಾ 080-22943381 ನ್ನು ಸಂಪರ್ಕಿಸಬಹುದಾಗಿದೆ. ಈ ನಿಯಮ 11-02-2023 ವರಗೆ ಮಾತ್ರ ಅನ್ವಯವಾಗುತ್ತದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸ್​​ ಪತ್ರಿಕಾ ಪ್ರಕಟನೆ ಹೊರಡಿಸಿದೆ.

Similar News