ನಟಿ ಸನ್ನಿ ಲಿಯೋನ್ ಫ್ಯಾಶನ್ ಶೋ ಕಾರ್ಯಕ್ರಮ ನಡೆಯಲಿರುವ ಸ್ಥಳದ ಸಮೀಪ ಪ್ರಬಲ ಸ್ಫೋಟ

Update: 2023-02-04 06:48 GMT

ಇಂಫಾಲ: ನಟಿ ಸನ್ನಿ ಲಿಯೋನ್ ರವಿವಾರ ಪಾಲ್ಗೊಳ್ಳಲಿರುವ ಫ್ಯಾಶನ್ ಶೋ ಕಾರ್ಯಕ್ರಮದ ಸ್ಥಳದ ಬಳಿ ಶನಿವಾರ ಪ್ರಬಲ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದ ರಾಜಧಾನಿಯ ಹಟ್ಟಾ ಕಾಂಗ್ಜೆಬುಂಗ್ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಯಾವುದೇ ಸಾವು-ನೋವಾಗಿರುವ ಕುರಿತು  ವರದಿಯಾಗಿಲ್ಲ.

ಶನಿವಾರ ಬೆಳಗ್ಗೆ 6.30ರ ಸುಮಾರಿಗೆ ಕಾರ್ಯಕ್ರಮ ಸ್ಥಳದಿಂದ ಕೇವಲ 100 ಮೀಟರ್ ದೂರದಲ್ಲಿ ಸ್ಫೋಟ ಸಂಭವಿಸಿದೆ.

ಸುಧಾರಿತ ಸ್ಫೋಟಕ ಸಾಧನ ಅಥವಾ ಗ್ರೆನೇಡ್‌ನಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲ

Similar News