ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶ್ವ ಕ್ಯಾನ್ಸರ್ ಜಾಗೃತಿ ದಿನ

Update: 2023-02-04 07:45 GMT

ಮಂಗಳೂರು, ಫೆ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರದ ಸರ್ಕಾರಿ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಪ್ಯಾಲಿಯೇಟಿವ್ ಮೆಡಿಸನ್ ವಿಭಾಗ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಮಂಗಳೂರಿನ ಜಿಲ್ಲಾ ಎನ್.ಸಿ.ಡಿ ಕೋಶದ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ವೆನ್‍ಲಾಕ್ ಆಸ್ಪತ್ರೆಯಲ್ಲಿ ವಿಶ್ವಕ್ಯಾನ್ಸರ್ ಜಾಗೃತಿ ದಿನ ಶನಿವಾರ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ವೆನ್‍ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶಾನುಭೋಗ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಸುಧಾಕರ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Similar News