ದಿಲ್ಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

Update: 2023-02-04 09:17 GMT

ಹೊಸದಿಲ್ಲಿ: ಈಗ ರದ್ದಾದ ಮದ್ಯ ಮಾರಾಟ ನೀತಿಯಲ್ಲಿ ನಡೆದಿದೆ ಎನ್ನಲಾದ  ಭ್ರಷ್ಟಾಚಾರದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಶನಿವಾರ ದಿಲ್ಲಿಯ ಆಮ್ ಆದ್ಮಿ ಪಕ್ಷದ ಕಚೇರಿಗಳ ಮುಂದೆ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಪೂರಕ ಚಾರ್ಜ್ ಶೀಟ್ ಪ್ರಶ್ನಿಸಿದ್ದಕ್ಕಾಗಿ ಮುಖ್ಯಮಂತ್ರಿಯನ್ನು ಬಿಜೆಪಿ ಗುರಿಯಾಗಿಸಿದೆ ಹಾಗೂ ಕೇಜ್ರಿವಾಲ್  ಅವರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ ಎಂದು ಹೇಳಿದೆ.

ದಿಲ್ಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಐವರು  ವ್ಯಕ್ತಿಗಳು ಹಾಗೂ  ಏಳು ಕಂಪನಿಗಳ ವಿರುದ್ಧದ ಪೂರಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯವು ಗುರುವಾರ ಅಂಗೀಕರಿಸಿತು, ಭ್ರಷ್ಟಾಚಾರ ಆರೋಪದ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಎಎಪಿ ಸರ್ಕಾರವು ಕಳೆದ ವರ್ಷ ದಿಲ್ಲಿ ಅಬಕಾರಿ ನೀತಿಯನ್ನು ಹಿಂತೆಗೆದುಕೊಂಡಿತು.

Similar News