ರಾಜ್ಯದಲ್ಲಿ ಎಪ್ರಿಲ್ 10-12 ರ ಮೊದಲು ವಿಧಾನಸಭೆ ಚುನಾವಣೆ ಸಾಧ್ಯತೆ: ಬಿ.ಎಸ್. ಯಡಿಯೂರಪ್ಪ

Update: 2023-02-04 10:48 GMT

ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್ 10-12 ರ ಮೊದಲು ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ನಗರದ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, 'ರಾಜ್ಯ ಮತ್ತು ಕೇಂದ್ರದ ಸಾಧನೆಗಳ ಮೇಲೆ ಪಕ್ಷವು ಚುನಾವಣೆಯಲ್ಲಿ 130-140 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಲ್ಲಿ ಕರ್ನಾಟಕ ಸೇರಿದಂತೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುವುದರಲ್ಲಿ ಸಂದೇಹವಿಲ್ಲ ಎಂದು ಇದೇ ವೇಳೆ ಯಡಿಯೂರಪ್ಪ ಹೇಳಿದರು. 

Similar News