ಮಂಗಳೂರು: 90 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

Update: 2023-02-04 14:03 GMT

ಮಂಗಳೂರು: ಬಾಬಾ ಸೂಟ್ ಬಟನ್, ಟ್ರಾಲಿ ಬ್ಯಾಗ್, ಪ್ಯಾಂಟ್ ಹುಕ್ಸ್‌ನಲ್ಲಿ ಚಿನ್ನವನ್ನು ಜ.19 ರಿಂದ 31ರ ಮಧ್ಯೆ ಅಕ್ರಮವಾಗಿ ಸಾಗಾಟ ಮಾಡಿದ ಪ್ರತ್ಯೆಕ ಪ್ರಕರಣಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಒಟ್ಟು 24 ಕ್ಯಾರೆಟ್ ಶುದ್ದತೆಯ 1617.0 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಅದರ ಮೌಲ್ಯ 90,34,970 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುವುದು ಪತ್ತೆಯಾಗಿದೆ. ಒಬ್ಬ ಪ್ರಯಾಣಿಕನಿಂದ 6,42,740 ರೂ. ಮೌಲ್ಯದ ಸಿಗರೇಟ್ ಹಾಗೂ ಇ -ಸಿಗರೇಟ್ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Similar News