ಈಶ್ವರಪ್ಪಗೆ ಮಂತ್ರಿ ಸ್ಥಾನ ನೀಡಬೇಕಿತ್ತು, ಅವರ ಜಾಗದಲ್ಲಿ ನಾನಿದ್ದರೂ ಅದನ್ನೇ ಹೇಳುತ್ತಿದ್ದೆ: ಸಿ.ಟಿ. ರವಿ

Update: 2023-02-04 15:09 GMT

ಚಿಕ್ಕಮಗಳೂರು: 'ಈಶ್ವರಪ್ಪನವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರ ಜಾಗದಲ್ಲಿ ನಾನಿದ್ದರೂ ಅದನ್ನೇ ಹೇಳುತ್ತಿದ್ದೆ. ಈಶ್ವರಪ್ಪ ಪಕ್ಷ ಕಟ್ಟಿದ ಹಿರಿಯ ನಾಯಕರಲ್ಲಿ ಒಬ್ಬರು. ಅಂದು ಆರೋಪ ಬಂದಾಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಆದರೆ ಇಂದು ತನಿಖೆಯಲ್ಲಿ ಅವರ ಪಾತ್ರ ಇಲ್ಲವೆಂದು ಸಾಬೀತಾಗಿದೆ. ಈಗ ಅವರು ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಅವರಿಗೆ ಮಂತ್ರಿ ಸ್ಥಾನವನ್ನು ಕೊಡಬೇಕಿತ್ತು' ಎಂದು ಬಿಜೆಪಿ ರಾಷ್ಟ್ರೀ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. 

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರ ಗೌರವಕ್ಕೆ ಯಾವುದೇ ಕುಂದು ಉಂಟಾಗಲ್ಲ. ಶುಕ್ರವಾರ ಕೂಡ ಪಕ್ಷದ ಕೋರ್ ಕಮಿಟಿ ಸಭೆಯಲ್ಲೂ ಪಕ್ಷದ ಗೆಲುವಿನ ಬಗ್ಗೆ ಅವರು ಸಲಹೆ ನೀಡಿದ್ದಾರೆ. ಅವರು ಯಾವತ್ತೂ ನಮ್ಮ ಹಿರಿಯ ನಾಯಕರಲ್ಲಿ ಒಬ್ಬರು. ಅವರ ಗೌರವಕ್ಕೆ ಕುಂದು ಬರಲು ಅವಕಾಶ ನೀಡುವುದಿಲ್ಲ. ಅವರು ಮಂತ್ರಿ ಆಗಿದ್ದರೆ ಅತ್ಯಂತ ಸಂತೋಷ ಪಡುವ ವ್ಯಕ್ತಿಯಲ್ಲಿ ನಾನೂ ಒಬ್ಬ ಎಂದರು.

''ದಲಿತರಿಗೆ ಕಾಂಗ್ರೆಸ್ ನಿಂದ ಮೋಸ'': ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ದಲಿತರಿಗೆ ಕಾಂಗ್ರೆಸ್ ಮೋಸ ಮಾಡಿದೆ. ಆದರೆ, ದಲಿತರಿಗೆ ಮೀಸಲಾತಿ ಹೆಚ್ಚಳ ಮಾಡಿದ್ದು ಬಿಜೆಪಿ. ಪರಮೇಶ್ವರ್ ಹಾಗೂ ಮುನಿಯಪ್ಪರನ್ನ ಸೋಲಿಸಿದ್ದೂ ಇದೇ ಕಾಂಗ್ರೆಸ್ಸಿಗರು. ಇದು ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎನ್ನುವಷ್ಟೇ ಬಹಿರಂಗ ಸತ್ಯ ಎಂದು ಸಿ.ಟಿ. ರವಿ ಆರೋಪಿಸಿದರು. 

Similar News