ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಾರೋಪ

Update: 2023-02-04 17:37 GMT

ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವೀರ ರಾಣಿ ಅಬ್ಬಕ್ಕ ಉತ್ಸವ 2022-23 ಕಾರ್ಯಕ್ರಮದ  ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉಳ್ಳಾಲ ನಗರ ಸಭೆ ಅಧೀನದಲ್ಲಿರುವ ಮಹಾತ್ಮ ಗಾಂಧಿ ರಂಗ ಮಂದಿರದಲ್ಲಿ ಶನಿವಾರ ಸಂಜೆ ಸಡಗರದಿಂದ ನಡೆಯಿತು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಜಿಲ್ಲಾಧ್ಯಕ್ಷ  ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ, ತೌಳವ ಸಂಸ್ಕೃತಿ ಕಟ್ಟಿಕೊಂಡ ನಮಗೆ ಕಾರ್ಯಕ್ರಮ ಮಾಡಲು ಸರ್ಕಾರದ ಅನುದಾನ ಕಾಯುವ ಪ್ರಶ್ನೆ ಇಲ್ಲ. ಕೋಲ್ಕಲಿ, ಧಫ್ ಮುಂತಾದ ಸಂಸ್ಕೃತಿ  ಇಲ್ಲಿದೆ. ಐಕ್ಯತೆಯಿಂದ ಕಾರ್ಯಕ್ರಮ ಮಾಡಿಕೊಂಡು ಹೋಗಬೇಕಾಗಿದೆ. ಈವರೆಗೆ ಉಳ್ಳಾಲ ದರ್ಗಾ ಉರೂಸ್, ಅತ್ತೂರು ಜಾತ್ರೆ ಸಹಿತ ಇತರ ಧಾರ್ಮಿಕ ಕ್ಷೇತ್ರಗಳ ಕಾರ್ಯಗಳು ಸರ್ಕಾರದ ಅನುದಾನ ನಂಬಿ ಮಾಡಿದ್ದಿಲ್ಲ. ಎಲ್ಲಾ ಸಂಸ್ಕೃತಿಗೂ ನಾವು ಗೌರವ ಕೊಡಬೇಕಾಗಿದೆ ಎಂದು  ಹೇಳಿದರು.

ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ರಾಣಿ ಅಬ್ಬಕ್ಕ ಅಧ್ಯಯನ ಪೀಠ ಸಂಯೋಜಕ ಗಣೇಶ್ ಅಮೀನ್ ಸಂಕಮಾರ್ ಸಮಾರೋಪ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಸಾಹಿತಿ ಡಾ.ಪಾರ್ವತಿ ಜಿ.ಐತಾಳ್ ಅವರಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ ಮತ್ತು ಜಾನಪದ ಕಲಾವಿದೆ ಶ್ರೀಮತಿ ಭವಾನಿ ಅವರಿಗೆ ವೀರ ರಾಣಿ ಅಬ್ಬಕ್ಕ ಪುರಸ್ಕಾರ ನೀಡಿ ಗೌರವಿಸಲಾಯಿತು.  

ಕಾರ್ಯಕ್ರಮದಲ್ಲಿ  ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರಿಸ್ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೋಟ್ಟು, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ,ಚೀರುಂಭ ಭಗವತಿ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ ಉಳ್ಳಾಲ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮೋಹನ ಕುಮಾರ್, ಸೋಮೇಶ್ವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಉಚ್ಚಿಲ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮೀಜಾರ್, ವೀರ ಮಾರುತಿ ವ್ಯಾಯಾಮ ಶಾಲೆ ನಿರ್ದೇಶಕ ವಿಠಲ ಶ್ರೀಯಾನ್,  ಅಬ್ಬಕ್ಕ ಉತ್ಸವ ಸಮಿತಿ ಗೌರವ ಉಪಾಧ್ಯಕ್ಷ ಸೀತಾರಾಂ ಬಂಗೇರ, ಫೆರ್ಮನ್ನೂರು ಚರ್ಚ್ ಧರ್ಮಗುರು ಸಿಪ್ರಿಯನ್ ಪಿಂಟೋ, ಉಪಾಧ್ಯಕ್ಷ ಅರುಣ್ ಡಿ ಸೋಜ, ಹಿಂದುಳಿದ ವರ್ಗದ ಆಯೋಗದ ಸದಸ್ಯ ಕೆಟಿ ಸುವರ್ಣ ನಗರ ಸಭೆ ಪೌರಾಯುಕ್ತ ವಿದ್ಯಾ ಕಾಳೆ ಸದಸ್ಯ ರಾದ ನಮೀತಾ, ಸಪ್ನ ಹರೀಶ್, ಇಸ್ಮಾಯೀಲ್ ಮತ್ತಿತರರು ಉಪಸ್ಥಿತರಿದ್ದರು.

ಅಬ್ಬಕ್ಕ ಉತ್ಸವ ಸಮಿತಿ ಸ್ವಾಗತಾಧ್ಯಕ್ಷ  ಕೆ.ಜಯರಾಮಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ ಸ್ವಾಗತಿಸಿದರು. ಧನಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಆನಂದ ಅಸೈಗೋಳಿ ವಂದಿಸಿದರು.

Similar News