×
Ad

ಪಾಂಗಾಳ: ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

Update: 2023-02-05 19:04 IST

ಕಾಪು:  ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ರವಿವಾರ ಸಂಜೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ.

ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಕೊಲೆಗೀಡಾದ ವ್ಯಕ್ತಿ.

ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಅಂಗಡಿಯ ಬಳಿ ಈ ಕೃತ್ಯ ನಡೆದಿದ್ದು, ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ‌ ಬಿದ್ದಿದ್ದ ಶರತ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು.

ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೈ ಸುಮ ಬಿ., ಕ್ರೈಂ ಎಸ್ಸೈ ಭರತೇಶ್ ಕಂಕಣವಾಡಿ ಸಹಿತ  ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಭೂ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಡಿವೈಎಸ್ಪಿನೇತೃತ್ವದಲ್ಲಿ ಮೂರು ತಂಡಗಳ ರಚನೆ: ಎಸ್ಪಿ

ಪಾಂಗಾಳದ ಶರತ್ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು ಈ ಸಂಬಂಧ ಕಾರ್ಕಳ ಡಿವೈಎಸ್ಪಿನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಶರತ್ ಶೆಟ್ಟಿ ಕೋಲ ನೋಡುತ್ತಿದ್ದ ಸ್ಥಳದಿಂದ ಯಾವ ಕಾರಣಕ್ಕೆ ಹೊರಗೆ ಬಂದರು ಎಂಬುದು ಗೊತ್ತಾಗಿಲ್ಲ. ಅಲ್ಲಿ ಪ್ರತ್ಯಕ್ಷ ಸಾಕ್ಷಿ ಕೂಡ ಇರಲಿಲ್ಲ. ಸ್ಥಳದಲ್ಲಿ ಕೆಲವು ಸುಳಿವುಗಳು ಪತ್ತೆಯಾಗಿವೆ. ಆ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆಯಿಂದ ಗೊತ್ತಾಗಬೇಕಿದೆ. ಸಿಸಿಟಿವಿ ಪೂಟೇಜ್ ಸಿಕ್ಕಿಲ್ಲ. ಆರೋಪಿಗಳಿಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಎಸ್ಪಿಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದರು.

Similar News