ಬೆಂಗಳೂರು: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕರಿಬ್ಬರು ಮೃತ್ಯು

Update: 2023-02-05 16:08 GMT

ಬೆಂಗಳೂರು, ಫೆ.5: ವಿದ್ಯುತ್ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಇಲ್ಲಿನ ಕೋಣನಕುಂಟೆಯ ಬಹುಮಹಡಿ ಕಟ್ಟಡವೊಂದರಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಅಸ್ಸಾಂ ಮೂಲದ ದಿಲೀಪ್ ಹಾಗೂ ತುಮಕೂರು ಜಿಲ್ಲೆಯ ಮಧುಗಿರಿಯ ರಘು ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ. 

ಕಟ್ಟಡದಲ್ಲಿ ರಾತ್ರಿ ವೇಳೆ ಎಸ್‍ಟಿಪಿಯಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿದೆ. ಇದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದ್ದು, ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

Similar News