ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ತುರ್ತು ವಿಚಾರಣೆಗೆ ಡಿಕೆಶಿ ಪರ ವಕೀಲರಿಂದ ಮನವಿ

Update: 2023-02-05 16:57 GMT

ಬೆಂಗಳೂರು, ಫೆ. 5: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಂಬಂಧ ಸಿಬಿಐ ದಾಖಲಿಸಿರುವ ಪ್ರಕರಣವನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ವಕೀಲರು ಹೈಕೋರ್ಟ್‍ಗೆ ಮನವಿ ಮಾಡಿದರು.    

ಈ ಕುರಿತಂತೆ ಡಿಕೆಶಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ಹೈಕೋರ್ಟ್‍ನ ನ್ಯಾಯಪೀಠಕ್ಕೆ ತಿಳಿಸಿದರು. 

ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸಿಬಿಐ ಪರ ಕಿರಿಯ ವಕೀಲರು ಹಾಜರಾಗಿ ವಿಚಾರಣೆ ಮುಂದೂಡುವಂತೆ ಪೀಠಕ್ಕೆ ಮನವಿ ಮಾಡಿಕೊಂಡರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ಪರ ವಕೀಲರು, ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಕೋರಿದರು. ಆದರೆ, ನ್ಯಾಯಪೀಠವು ಸಿಬಿಐ ಪರ ವಕೀಲರು ಸಿಬಿಐ ಪರವಾದ ಕಿರಿಯ ವಕೀಲರ ಮನವಿಯನ್ನು ಮಾನ್ಯ ಮಾಡಿ ವಿಚಾರಣೆಯನ್ನು ಮುಂದೂಡಿತು. 

ಪ್ರಕರಣವೇನು?: ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ–1988ರ ಕಲಂ 13(2), 13(1)(ಇ) ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿಕೆಶಿ ವಿರುದ್ಧ ಪ್ರಕರಣ ದಾಖಲಿಸಿದೆ. ಸಿಬಿಐ ದಾಖಲಿಸಿರುವ ಈ ಎಫ್‍ಐಆರ್ ಕಾನೂನು ಬಾಹಿರವಾಗಿದೆ. ಇದನ್ನು ರದ್ದುಗೊಳಿಸಬೇಕು ಎಂದು ಕೋರಿ ಶಿವಕುಮಾರ್ ಅವರು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.

Similar News