ಉಡುಪಿ | ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-02-05 18:08 GMT

ಮಣಿಪಾಲ, ಫೆ.5: ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಶನಿವಾರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ವರದಿಯಾಗಿದೆ.

ಮೃತರನ್ನು ಉದಯ ಭಂಡಾರಿ(42)ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಕಾರು ಮಾರಾಟದ ವ್ಯಾಪಾರ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಉಡುಪಿ ಪುತ್ತೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತರನ್ನು ಪುತ್ತೂರು ಗ್ರಾಮದ ಮಿಕ್ದಾದ್ ಮುಹಮ್ಮದ್ ಅಲಿ(38) ಎಂದು ಗುರುತಿಸಲಾಗಿದೆ.

ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News