ಮಹಿಳಾ ಐಪಿಎಲ್‌ನ ಮುಂಬೆ ಇಂಡಿಯನ್ ಬೌಲಿಂಗ್ ಕೋಚ್ ಆಗಿ ಜೂಲನ್ ಗೋಸ್ವಾಮಿ ನೇಮಕ

Update: 2023-02-05 18:24 GMT

ಮುಂಬೈ, ಫೆ.5: ಮುಂಬರುವ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (ಡಬ್ಲುಪಿಎಲ್) ತಮ್ಮ ಹೊಸ ಫ್ರಾಂಚೈಸಿಯಲ್ಲಿ ಭಾರತದ ಮಾಜಿ ಶ್ರೇಷ್ಠ ವೇಗದ ಬೌಲರ್ ಜೂಲನ್ ಗೋಸ್ವಾಮಿ ತಂಡದ ಮಾರ್ಗದರ್ಶಕಿ ಹಾಗೂ ಬೌಲಿಂಗ್ ಕೋಚ್ ಆಗಿ ಎರಡೂ ಹುದ್ದೆಯನ್ನು ನಿರ್ವಹಿಸಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ರವಿವಾರ ಪ್ರಕಟಿಸಿದೆ.

ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಚಾರ್ಲೊಟ್ ಎಡ್ವರ್ಡ್ಸ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದರೆ, ಭಾರತದ ಮಾಜಿ ಆಲ್ ರೌಂಡರ್ ದೇವಿಕಾ ಪಾಲ್ಶಿಕರ್ ತಂಡದ ಬ್ಯಾಟಿಂಗ್ ಕೋಚ್ ಆಗಲಿದ್ದು, ತೃಪ್ತಿ ಚಂದಾಗಡ್ಕರ್ ಭಟ್ಟಾಚಾರ್ಯ ತಂಡದ ಮ್ಯಾನೇಜರ್ ಆಗಿ ನೇಮಕಗೊಂಡಿದ್ದಾರೆ.

   

ಪದ್ಮಶ್ರೀ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಜೂಲನ್ ಗೋಸ್ವಾಮಿ ಅವರು ಮಹಿಳಾ ಕ್ರಿಕೆಟಿನ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿದ್ದಾರೆ. 20 ವರ್ಷಗಳ ವೃತ್ತಿಜೀವನದಲ್ಲಿ ಅವರು 350 ಅಂತರ್ ರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದರು. ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ದಾಖಲೆ ಹಾಗೂ ಮಹಿಳಾ ವಿಶ್ವಕಪ್‌ಗಳಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಅವರು ಹೊಂದಿದ್ದಾರೆ.

 ಗೋಸ್ವಾಮಿ ಜನವರಿ 2016 ರಲ್ಲಿ ಐಸಿಸಿ ಮಹಿಳಾ ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ ಮೊದಲ ಸ್ಥಾನಕ್ಕೆ ಏರಿದರು ಹಾಗೂ ನಿವೃತ್ತಿಯ ನಂತರ ಬಂಗಾಳದ ಮಹಿಳಾ ಕ್ರಿಕೆಟ್ ತಂಡದ ಮಾರ್ಗದರ್ಶಕರಾಗಿ ಮುಂದಿನ ಪೀಳಿಗೆಯ ಕ್ರಿಕೆಟಿಗರನ್ನು ಬೆಳೆಯಲು ಸಹಾಯ ಮಾಡುತ್ತಿದ್ದಾರೆ.

   ಮಹಿಳಾ ಕ್ರಿಕೆಟ್ ನಲ್ಲಿ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಗೋಸ್ವಾಮಿ ಅವರು 20 ವರ್ಷಗಳ ಕಾಲ ವೃತ್ತಿಜೀವನದಲ್ಲಿ ಇಂಗ್ಲೆಂಡ್‌ಗೆ ಏಕದಿನ ಹಾಗೂ ಟಿ-20 ಕ್ರಿಕೆಟ್ ವಿಶ್ವಕಪ್ ಗೆಲ್ಲಲು ತಂಡದ ನಾಯಕತ್ವವಹಿಸಿದ್ದರು.

Similar News