ಅದಾನಿ ಗ್ರೂಪ್ ವಿರುದ್ಧ ವಂಚನೆ ಆರೋಪ: ಚರ್ಚೆ,ತನಿಖೆಗಾಗಿ ಪ್ರತಿಪಕ್ಷಗಳ ಪ್ರತಿಭಟನೆ, ಸಂಸತ್ತು ಮುಂದೂಡಿಕೆ

Update: 2023-02-06 06:14 GMT

ಹೊಸದಿಲ್ಲಿ: ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪದ ಬಗ್ಗೆ ಚರ್ಚೆ ಹಾಗೂ  ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷಗಳ ಭಾರೀ ಪ್ರತಿಭಟನೆ ಹಾಗೂ  ಘೋಷಣೆಗಳನ್ನು ಮುಂದುವರಿಸಿದ ಕಾರಣ ಸಂಸತ್ತಿನ ಉಭಯ ಸದನಗಳನ್ನು ಇಂದು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಇಂದು ಸಂಸತ್ ಭವನದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ ಸಭೆಯ ನಂತರ ವಿರೋಧ ಪಕ್ಷಗಳು, ಅದಾನಿ ಗ್ರೂಪ್ ಕಂಪನಿಗಳ ಕುರಿತು ಅಮೆರಿಕ ಮೂಲದ ಶಾರ್ಟ್ ಸೆಲ್ಲರ್  ಹಿಂಡೆನ್‌ಬರ್ಗ್ ರಿಸರ್ಚ್ ವರದಿಯ ಕುರಿತು ಚರ್ಚೆಯ ಬೇಡಿಕೆಯನ್ನು ಪ್ರಸ್ತಾಪಿಸಲು ನಿರ್ಧರಿಸಿದವು. ಹಾಗೂ  ಎರಡೂ ಸದನಗಳಲ್ಲಿ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಲು ಒತ್ತಾಯಿಸಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನಲ್ಲಿ ಬೇರೆ ಯಾವುದೇ ಚರ್ಚೆಗೆ ಅವಕಾಶ ನೀಡದಿರಲು ಪ್ರತಿಪಕ್ಷಗಳು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಉಭಯ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯಲಿದೆ

Similar News