ಮಥುರಾ ಶಾಹಿ ಈದ್ಗಾ ಮಸೀದಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಸರಕಾರ

ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌

Update: 2023-02-06 06:55 GMT

ಹೊಸದಿಲ್ಲಿ: 'ಅಕ್ರಮ' ವಿದ್ಯುತ್‌ ಸಂಪರ್ಕ (Electricity Connection) ಹೊಂದಿರುವುದಾಗಿ ಆರೋಪಿಸಿದ ಮಥುರಾದ ಶಾಹಿ ಈದ್ಗಾ ಮಸೀದಿಯ (Shahi Idgah mosque) ವಿದ್ಯುತ್ ಸಂಪರ್ಕವನ್ನು ಸರ್ಕಾರವು ಫೆಬ್ರವರಿ 5 ರಂದು ಕಡಿತಗೊಳಿಸಿದೆ ಎಂದು ವರದಿಯಾಗಿದೆ. 

PTI ಪ್ರಕಾರ, ಕೃಷ್ಣ ನಗರ ಪೊಲೀಸ್ ಠಾಣೆಯಲ್ಲಿ 2003 ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135 ರ ಅಡಿಯಲ್ಲಿ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಶಾಹಿ ಈದ್ಗಾ ಮಸೀದಿ ಸಮಿತಿಯ ಕಾರ್ಯದರ್ಶಿಗೂ ಪೊಲೀಸ್ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಅಕ್ರಮ ವಿದ್ಯುತ್ ಬಳಕೆಯ ವಿರುದ್ಧ ನಡೆಯುತ್ತಿರುವ ಅಭಿಯಾನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿರುವುದಾಗಿ ವರದಿಯಾಗಿದೆ.   

ಮಥುರಾ ಜಿಲ್ಲಾ ಪೊಲೀಸ್ ಮತ್ತು ವಿದ್ಯುತ್ ಇಲಾಖೆಯ ಜಂಟಿ ತಂಡವು ಮಸೀದಿಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಹಿ ಈದ್ಗಾ ಮಸೀದಿಯ ವಿರುದ್ಧ ಹೋರಾಟ ಮಾಡುತ್ತಿರುವ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ ನೀಡಿದ ದೂರಿನ ಆಧಾರದಲ್ಲಿ ಮಸೀದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಇದನ್ನೂ ಓದಿ: ಅದಾನಿ ಗ್ರೂಪ್ ವಿರುದ್ಧ ವಂಚನೆ ಆರೋಪ: ಚರ್ಚೆ,ತನಿಖೆಗಾಗಿ  ಪ್ರತಿಪಕ್ಷಗಳ ಪ್ರತಿಭಟನೆ, ಸಂಸತ್ತು ಮುಂದೂಡಿಕೆ

Similar News