ಉದ್ಯಾವರ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2023-02-06 07:50 GMT

ಕಾಪು, ಫೆ.6: ಉದ್ಯಾವರ ಸಮೀಪದ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.

ಮೃತರಿಗೆ ಸುಮಾರು 40 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಇವರು ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತದೇಹವನ್ನು ಸಾಗಿಸಲು ಮುಳುಗು ತಜ್ಞ ಈಶ್ವರ್ ಮಲ್ಪೆ ಸಹಕರಿಸಿದರು. ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ವಾರೀಸುದಾರರು ಕಾಪು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.     

Similar News