ಭೂಕಂಪದ ದುರಂತ ನಿಭಾಯಿಸಲು ಟರ್ಕಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ದ: ಪ್ರಧಾನಿ ಮೋದಿ

Update: 2023-02-06 07:45 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ( Prime Minister Narendra Modi) ಅವರು ಸೋಮವಾರ ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಲ್ಲಿ ಆಗಿರುವ ಜೀವಹಾನಿಗೆ ಸಂತಾಪ ಸೂಚಿಸಿದ್ದು, ಈ ದುರಂತವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಸೋಮವಾರ ಮುಂಜಾನೆ ಆಗ್ನೇಯ ಟರ್ಕಿ ಹಾಗೂ  ಸಿರಿಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಎರಡೂ ದೇಶಗಳಲ್ಲಿ ಕನಿಷ್ಠ 195 ಜನರು ಸಾವನ್ನಪ್ಪಿದ್ದಾರೆ, ನೂರಾರು ಜನರು ಗಾಯಗೊಂಡಿದ್ದಾರೆ ಸಾವಿನ  ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

"ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಆಗಿರುವ ಪ್ರಾಣಹಾನಿ ಹಾಗೂ  ಆಸ್ತಿಪಾಸ್ತಿ ಹಾನಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ" ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

"ಭಾರತವು ಟರ್ಕಿಯ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲಲಿದೆ.  ಈ ದುರಂತವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಸಿದ್ಧವಾಗಿದೆ" ಎಂದು ಪ್ರಧಾನಿ ಅವರು ಭೂಕಂಪದ ಕುರಿತು ಮಾಡಿದ ಟ್ವೀಟ್ ನಲ್ಲಿ  ಟರ್ಕಿಯ ಅಧ್ಯಕ್ಷ ರಿಸೆಪ್ ತಯೀಪ್ ಎರ್ಡೋಗನ್   ಅವರನ್ನು  ಟ್ಯಾಗ್ ಮಾಡಿದ್ದಾರೆ.

Similar News