ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ನಟ ಚೇತನ್ ಅಹಿಂಸಾ

Update: 2023-02-06 08:45 GMT

ಬೆಂಗಳೂರು, ಫೆ. 6: 'ಜಾತ್ಯತೀತ ಜನತಾದಳ (ಜೆಡಿಎಸ್ )ಪಕ್ಷವೇ ಒಂದು 'ಬ್ರಾಹ್ಮಣ್ಯ'ದ ಪಕ್ಷ' ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಸೋಮವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಪ್ರಹ್ಲಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ ಎಂದು ಹೇಳಿದ್ದರು. ಮುಂದುವರೆದು ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ. ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ –ಬ್ರಾಹ್ಮಣ್ಯವು ದೊಡ್ಡ ಸಮಸ್ಯೆ ಎಂದು ಚೇತನ್  ಬರೆದುಕೊಂಡಿದ್ದಾರೆ.

'ಬ್ರಾಹ್ಮಣ ಸಮುದಾಯದ ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರೆಸ್ಸೆಸ್ ತೀರ್ಮಾನ': ವಿಧಾನಸಭೆ ಚುನಾವಣೆಯ ಬಳಿಕ ಆರೆಸ್ಸೆಸ್, ಸಂಘ ಪರಿವಾರದವರು ಬ್ರಾಹ್ಮಣ ಸಮುದಾಯದ ಪ್ರಹ್ಲಾದ್ ಜೋಶಿಯವರನ್ನು ಮುಖ್ಯಮಂತ್ರಿ ಮಾಡಲು ತೀರ್ಮಾನಿಸಿದ್ದಾರೆ’ ಎಂದೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಹೇಳಿಕೆ ನೀಡಿದ್ದರು.

ಇದನ್ನೂ ಓದಿ:  ಕಲಬುರಗಿ: ಚಾಕು ಹಿಡಿದು ಸಾರ್ವಜನಿಕರನ್ನು ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಪೊಲೀಸರು

Similar News