ವಿಜಯಪುರ | ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ, ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

Update: 2023-02-06 19:03 GMT

ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ರವಿವಾರ ನಡೆದ 37 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪದಲ್ಲಿ ಸಾಧಕ ಪತ್ರಕರ್ತರಿಗೆ ವಿವಿಧ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ ಕಾರ್ಯಕ್ರಮ ನಿರ್ವಹಿಸಿದರು. 

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಮತನಾಡಿದರು, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಪ್ರಕಾಶ ರಾಠೋಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಮಾಜಿ ಶಾಸಕ ಡಾ.ಮಕ್ಬೂಲ್ ಬಾಗವಾನ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಮೊಹ್ಮದ್‍ರಫೀಕ್ ಟಪಾಲ್, ಐಯುಡಬ್ಲ್ಯೂಜೆ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪ್ರಕಾಶ ಶೆಟ್ಟಿ ಇದ್ದರು.

Similar News