ಮೂಡಿಗೆರೆ: ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು

Update: 2023-02-07 10:59 GMT

ಮೂಡಿಗೆರೆ: ಇಲ್ಲಿನ ಬಿಳಗುಳ ಕೊಲ್ಲಿಬ್ಯೆಲ್ ಸಮೀಪದ ಲಕ್ಷ್ಮಣಗೌಡ ಎಂಬುವವರ ಸುಮಾರು 10ವರ್ಷದಿಂದ ಪಾಳುಬಿದ್ದ ಕಾಫಿ ತೋಟದಲ್ಲಿ ದುಷ್ಕರ್ಮಿಗಳು ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಚಿರತೆ (Leopard ) ಸಿಲುಕಿ ಸೋಮವಾರ ತಡರಾತ್ರಿ ಮೃತಪಟ್ಟಿದೆ. 

ಚಿರತೆಯ ಕೂಗಾಟ ಕೇಳಿ ದಾರಿಯಲ್ಲಿ ಹೋಗುವ ಪ್ರಯಾಣಿಕರು ಗಮನಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದು, ರಾತ್ರಿಯೇ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಚಿರತೆಯನ್ನು ಬದುಕಿಸಲು ಪ್ರಯತ್ನಪಟ್ಟಿದ್ದರಾದರೂ ಉರುಳು ಕುತ್ತಿಗೆಗೆ ಬಲವಾಗಿ ಸಿಲುಕಿದ್ದ ಕಾರಣ ಮೃತಪಟ್ಟಿದೆ ಎನ್ನಲಾಗಿದೆ.

ಈ ಸಂಬಂಧ ತೋಟದ ಮಾಲಕರು ಮತ್ತು ಉರುಳು ಹಾಕಿದ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂಡಿಗೆರೆ ಅರಣ್ಯ ಇಲಾಖೆಗೆ ಶವ ಸ್ಥಳಾಂತರಿಸಿ ಮರಣೋತ್ತರ ಪರೀಕ್ಷೆಯ ಬಳಿಕ ಚಿರತೆಯ ಅಂತ್ಯ ಸಂಸ್ಕಾರ ನಡೆಸಲು ತಿರ್ಮಾನಿಸಲಾಗಿದೆ.    

Similar News