ಬೆಂಗಳೂರು | ಸ್ನೇಹಿತೆಯರ ಮೇಲೆ ಅತ್ಯಾಚಾರಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Update: 2023-02-07 11:45 GMT

ಬೆಂಗಳೂರು, ಫೆ.7: ಸ್ನೇಹಿತೆಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ವಿವೇಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆದಿತ್ಯ ಮತ್ತು ಅಜಯ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಯುವತಿಯರು ಹಾಗೂ ಆರೋಪಿಗಳು ಖಾಸಗಿ ಯೂನಿವರ್ಸಿಟಿಯಲ್ಲಿ ಸಹಪಾಠಿಗಳಾಗಿದ್ದು, ಸದ್ಯ ಬೆಂಗಳೂರಿನ ಬೇರೆ ಬೇರೆ ಕಂಪೆನಿಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಆರೋಪಿಗಳು ಫೆ.5ರ ರಾತ್ರಿ ಪಾರ್ಟಿ ಮಾಡುವ ನೆಪದಲ್ಲಿ ಸ್ನೇಹಿತೆಯರನ್ನು ತಾವು ವಾಸವಿರುವ ವಿವೇಕನಗರದ ಪ್ರದೇಶಕ್ಕೆ ಕರೆಸಿಕೊಂಡಿದ್ದರು.ಆನಂತರ, ಮದ್ಯದ ಅಮಲಿನಲ್ಲಿ ಯುವತಿಯ ಮೇಲೆ ಓರ್ವ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. 

ಮತ್ತೋರ್ವ ಯುವತಿಯ ಖಾಸಗಿ ಭಾಗಗಳನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ದಾಖಲಾಗಿತ್ತು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ವಿವೇಕನಗರ ಠಾಣಾ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

Similar News