ನಿವೃತ್ತ ಐಎಎಸ್ ಅಧಿಕಾರಿ ಮನೆಯಿಂದ ವಶಪಡಿಸಿಕೊಂಡಿದ್ದ ಹಣ ಹಿಂದಿರುಗಿಸಿ: ಹೈಕೋರ್ಟ್ ಆದೇಶ

Update: 2023-02-07 13:40 GMT

ಬೆಂಗಳೂರು, ಫೆ.6: ಭ್ರಷ್ಟಾಚಾರ ಆರೋಪ ಸಂಬಂಧ ಉದ್ಯೋಗ ಮತ್ತು ತರಬೇತಿ ಇಲಾಖೆಯ ನಿವೃತ್ತ ನಿರ್ದೇಶಕರ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 12.15 ಲಕ್ಷ ರೂ.ಗಳನ್ನು ಹಿಂದಿರುಗಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. 

ಪ್ರಸ್ತುತ ಸೇವೆಯಿಂದ ನಿವೃತ್ತರಾಗಿರುವ 67 ವರ್ಷದ ಶಿವಲಿಂಗ ಮೂರ್ತಿ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಜೊತೆಗೆ ಅರ್ಜಿದಾರರಿಂದ ವಶಪಡಿಸಿಕೊಂಡ ಹಣ ಆದಾಯಕ್ಕೂ ಮೀರಿದ್ದಾಗಿದೆ ಎಂದು ಸಾಬೀತು ಪಡಿಸಲು ಲೋಕಾಯುಕ್ತ ಪೊಲೀಸರು ಯಾವುದೇ ತನಿಖೆ ನಡೆಸಿಲ್ಲ. ಹೀಗಾಗಿ ಅರ್ಜಿದಾರರಿಗೆ ಸೇರಬೇಕಾದ 12.15 ಲಕ್ಷ ಮೊತ್ತವನ್ನು ಹಿಂದಿರುಗಿಸಬೇಕು ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿದೆ. 

ಈ ನಡುವೆ ಅರ್ಜಿದಾರರು ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದು, ಅವರ ವಿರುದ್ಧ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರವಾದ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದರೂ, ಯಾವುದೇ ರೀತಿಯ ಮನವಿಯನ್ನು ಅಂಗೀಕರಿಸಿರಲಿಲ್ಲ.

Similar News