ಮೇಷ್ಟ್ರು ಆತ್ಮಹತ್ಯೆಗೂ, ಸಿ.ಟಿ.ರವಿಗೂ ಸಂಬಂಧವೇನು?: ಕುಮಾರಸ್ವಾಮಿ

Update: 2023-02-07 15:58 GMT

ಬೆಂಗಳೂರು, ಫೆ.7:ಅಮಾಯಕ ಕುಟುಂಬದ ಮೇಷ್ಟ್ರು ಒಬ್ಬರು ಕೆಆರ್ ಎಸ್ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡರು. ಅವರೇಕೆ ಸತ್ತರು. ಅದಕ್ಕೂ, ಸಿಟಿ ರವಿ ಅವರಿಗೆ ಇರುವ ಸಂಬಂಧವೇನು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ನಗರದ ಜೆಪಿಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರವಿ ಬಗ್ಗೆ ನಾನು ಮಾತಾಡೇ ಇಲ್ಲ. ಆದರೆ, ಅವರೇ ಕಾಲು ಕೆರೆದುಕೊಂಡು ಕಿತಾಪತಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಇವರೆಲ್ಲಾ ಸಚಾಗಳು, ನಾನು ಕಾಣದೇ ಇರುವವರಾ? ಎಚ್ಚರಿಕೆ ಇರಲಿ ನಮ್ಮ ಬಗ್ಗೆ ಮಾತಾಡುವಾಗ ಎಂದ ಅವರು, ಕರ್ನಾಟಕ ಪುಣ್ಯಭೂಮಿ. ಈ ನೆಲಕ್ಕೆ ತನ್ನದೇ ಆದ ಸಂಸ್ಕೃತಿ, ಪರಂಪರೆ ಇದೆ.

ಶೃಂಗೇರಿಯಲ್ಲಿ ವಿದ್ಯಾರಣ್ಯರು ಕಟ್ಟಿಸಿದ್ದ ಚಂದ್ರಮೌಶೇಶ್ವರ ದೇವಸ್ಥಾನದ ಮೇಲೆ ದಾಳಿ ದಾಳಿ ಮಾಡಿದವರು ಯಾರು? ದಾಳಿ ಮಾಡಿದ ಆ ಪೇಶ್ವೆಗಳನ್ನು ಹಿಮ್ಮೆಟ್ಟಿಸಿದವರು ಯಾರು? ಗಾಂಧಿ ಕೊಂದಿದ್ದವರು, ಶಿವಾಜಿ ಕೊಂದವರು ಯಾವ ಕಡೆಯವರು? ಇದರ ಬಗ್ಗೆ ಬಿಜೆಪಿಗರು ಯಾಕೆ ಮಾತನಾಡುತ್ತಿಲ್ಲ ಎಂದು ಕೇಳಿದರು.

Similar News