​ಬೆಳ್ತಂಗಡಿ: ಅನೈತಿಕ ಚಟುವಟಿಕೆ ಆರೋಪ; ಮಹಿಳೆಯರ ಸಹಿತ 7 ಮಂದಿಯ ಬಂಧನ

Update: 2023-02-07 15:58 GMT

ಬೆಳ್ತಂಗಡಿ: ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಅನೈತಿಕ ಚಟುವಟಿಕೆ ನಡೆಯುತ್ತಿತ್ತೆನ್ನಲಾದ ಉಜಿರೆಯ ಲಾಡ್ಜ್ ಒಂದಕ್ಕೆ ಪೊಲೀಸ್ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಘಟನೆಯ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಬಂಧಿತರಲ್ಲಿ 5 ಮಂದಿ ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ ಎಂದು ತಿಳಿದು ಬಂದಿದೆ

ನಿನ್ನೆಯಷ್ಟೆ (ಫೆ.6)ಬಂಟ್ವಾಳ ಡಿವೈಎಸ್ ಪಿ ನೇತೃತ್ವದ ತಂಡದಿಂದ ಉಜಿರೆಯ ಲಾಡ್ಜ್ ಗಳಿಗೆ ಸಾಮೂಹಿಕವಾಗಿ ಏಕಕಾಲದಲ್ಲಿ ದಾಳಿ ನಡೆದಿದ್ದು ಎಚ್ಚರಿಕೆ ನೀಡಿದ್ದರು. 

ಅಲ್ಲದೆ ಮಂಗಳವಾರ ಬೆಳಿಗ್ಗೆಯಷ್ಟೇ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲಕರ ಸಭೆ ನಡೆಸಿ ಯಾವುದೇ ಕಾರಣಕ್ಕೂ ಅನೈತಿಕ ವ್ಯವಹಾರ ಮಾಡದಂತೆ ಎಚ್ಚರಿಕೆಯನ್ನು ನೀಡಿದ್ದರು.

ಇದರ ಬೆನ್ನಲ್ಲೇ ಉಜಿರೆಯ ಲಾಡ್ಡಿನಲ್ಲಿ ಅಕ್ರಮ ವೇಶ್ಯವಾಟಿಕೆ ಬಗ್ಗೆ ಪೊಲೀಸರಿಗೆ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆನ್ನಲಾಗಿದೆ. ತಕ್ಷಣ ಪೊಲೀಸರು ಲಾಡ್ಜ್ ಗೆ ದಾಳಿ ನಡೆಸಿ 5 ಮಹಿಳೆಯರ ಸಹಿತ ಇಬ್ಬರು ಪುರುಷರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Similar News