×
Ad

ಉಡುಪಿ: ಅಧಿಕ ರಕ್ತದೊತ್ತಡದಿಂದ ಕುಸಿದು ಬಿದ್ದು ಉಪನ್ಯಾಸಕಿ ಮೃತ್ಯು

Update: 2023-02-07 22:30 IST

ಉಡುಪಿ: ಕಾಪು ಕಾಲೇಜಿನ ಉಪನ್ಯಾಸಕಿಯೊಬ್ಬರು ಅಧಿಕ ರಕ್ತ ದೊತ್ತಡದಿಂದ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಕೆಮ್ಮಣ್ಣು ನಿವಾಸಿ ಸುಶೀಲ(39) ಎಂದು ಗುರುತಿಸಲಾಗಿದೆ. ಕಾಪು ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿಕೊಂಡಿದ್ದ ಇವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಫೆ.3ರಂದು ಗಂಡನ ಬೈಕಿನಲ್ಲಿ ಹೋಗುತ್ತಿ ರುವಾಗ ಪುತ್ತೂರು ಗ್ರಾಮದ ಸಂತೆಕಟ್ಟೆ ಮಾಸ್ತಿಯಮ್ಮ ದೇವಸ್ಥಾನದ ಬಳಿ ಕುಸಿದು ಬಿದ್ದರೆನ್ನಲಾಗಿದೆ.

ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು ಫೆ.6ರಂದು ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News