×
Ad

ರೆಪೊ ದರ ಏರಿಸಿದ ಭಾರತೀಯ ರಿಸರ್ವ್ ಬ್ಯಾಂಕ್

Update: 2023-02-08 11:38 IST

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್(RBI ) ನಿರೀಕ್ಷೆಯಂತೆ ಬುಧವಾರ ತನ್ನ ಪ್ರಮುಖ ರೆಪೊ ದರವನ್ನು 25 ಮೂಲಾಂಶ ಹೆಚ್ಚಳ ಮಾಡಿದ್ದು, ಶೇ.6.5ಕ್ಕೆ ನಿಗದಿಪಡಿಸಲಾಗಿದೆ.

ಕೇಂದ್ರ ಬಜೆಟ್ ನ ಬಳಿಕ ನಡೆದ ಮೊದಲ ಹಣಕಾಸು ನೀತಿಯಲ್ಲಿ(ಎಂಪಿಸಿ)ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್  ಅವರು ರೆಪೊ ದರ ಹೆಚ್ಚಳವನ್ನು ಪ್ರಕಟಿಸಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಿಂದ ಆರ್ ಬಿಐ  ಆರನೇ ಬಾರಿ ಬಡ್ಡಿ ದರವನ್ನು ಹೆಚ್ಚಿಸಿದೆ.

ದ್ವೈಮಾಸಿಕ ಹಣಕಾಸು ನೀತಿ ಸಮಿತಿಯ ಬಹುತೇಕ ಸದಸ್ಯರು ಹಣದುಬ್ಬರ ನಿಯಂತ್ರಣ ಮಾಡಲು ಬಡ್ಡಿದರ ಹೆಚ್ಚಳದ ಪರವಾಗಿಯೇ ಮತ ನೀಡಿದ್ದಾರೆ.

Similar News