×
Ad

ಮಡಿಕೇರಿ: ಗುಂಡು ಹಾರಿಸಿಕೊಂಡು ನಿವೃತ್ತ ಅರಣ್ಯ ಅಧಿಕಾರಿ ಆತ್ಮಹತ್ಯೆ

Update: 2023-02-08 18:05 IST

ಮಡಿಕೇರಿ ಫೆ.8 : ನಿವೃತ್ತ ಅರಣ್ಯ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರ ಸಮೀಪದ ಬಸವನತ್ತೂರು ಗ್ರಾಮದಲ್ಲಿ ವರದಿಯಾಗಿದೆ.

ನಿವೃತ್ತ ಅಧಿಕಾರಿ ಟಿ.ವಿ.ಶಶಿ (75) ಎಂಬುವವರೆ ರಿವಲ್ವಾರ್ ನಿಂದ ತಲೆ ಭಾಗಕ್ಕೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿರುವುದಾಗಿ ತಿಳಿದು ಬಂದಿದೆ. 

ಮೃತರು ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. 

Similar News