ಆಂಬ್ಯುಲೆನ್ಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2023-02-08 14:08 GMT

ಮಡಿಕೇರಿ ಫೆ.8 : ಬೈಕ್ ಗೆ ಆಂಬ್ಯುಲೆನ್ಸ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿ- ಚೆಟ್ಟಳ್ಳಿ ರಸ್ತೆಯಲ್ಲಿ ನಡೆದಿದೆ.

ಮಡಿಕೇರಿಯಿಂದ ಚೆಟ್ಟಳ್ಳಿಗೆ ತೆರಳುತ್ತಿದ್ದ ಲೋಕೇಶ್ (44) ಎಂಬುವವರೇ ಮೃತ ದುರ್ದೈವಿ.  

ತಲೆಯ ಭಾಗಕ್ಕೆ ತೀವ್ರ ಗಾಯವಾಗಿದ್ದ ಲೋಕೇಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಮುಂದಾದಾಗ ಸ್ಥಳದಲ್ಲೇ  ಮೃತಪಟ್ಟರು ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 

Similar News