ಫೆಬ್ರವರಿ 10ರಿಂದ 24ರವರೆಗೆ ಬಜೆಟ್​ ಅಧಿವೇಶನ; ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Update: 2023-02-08 17:44 GMT

ಬೆಂಗಳೂರು, ಫೆ.8: ಫೆಬ್ರವರಿ 10ರಿಂದ 24ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶ ನಡೆಯುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಫೆ.10 ಬೆಳಗ್ಗೆ 6ರಿಂದ ಫೆ.24ರ ಮಧ್ಯರಾತ್ರಿ 12 ಗಂಟೆ ವರೆಗೆ (ಅಧಿವೇಶನ ನಡೆಯದ ದಿನ ಮತ್ತು ಸಾರ್ವತ್ರಿಕ ರಜಾ ದಿನ ಹೊರತುಪಡಿಸಿ) ವಿಧಾನಸೌಧದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರತಿಭಟನೆ, ಮೆರವಣಿಗೆ, ಸಭೆ, ಧರಣಿ ನಡೆಸುವಂತಿಲ್ಲ. 5 ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರಬಾರದು. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ, ಪ್ರಚೋದನಕಾರಿ ಘೋಷಣೆ ಕೂಗುವುದು, ಮಾರಕಾಸ್ತ್ರ ಹಾಗೂ ಸ್ಫೋಟಕ ಸಿಡಿಸುವುದನ್ನು ನಿಷೇಧಿಸಲಾಗಿದೆ.

Similar News