ಭಾರತದಲ್ಲಿ ಅಕ್ರಮ ವಾಸ: ಗುಜರಿ ಅಂಗಡಿ ಮಾಲಕನಿಗೆ ಹೈಕೋರ್ಟ್ ನಿಂದ ಜಾಮೀನು ನಿರಾಕರಣೆ

Update: 2023-02-09 04:07 GMT

ಬೆಂಗಳೂರು, ಫೆ.8: ಎರಡು ದಶಕಗಳಿಂದ ಅಕ್ರಮವಾಗಿ ಭಾರತ ದೇಶದಲ್ಲಿ ನೆಲೆಗೊಂಡಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ರುವ ಬಾಂಗ್ಲಾದೇಶದ ಪ್ರಜೆ ಎನ್ನಲಾದ ಗುಜರಿ ಅಂಗಡಿಯ ಮಾಲಕ ನೊಬ್ಬನಿಗೆ ಹೈಕೋರ್ಟ್ ಜಾಮೀನು ಮಂಜೂರಾತಿಗೆ ನಿರಾಕರಿಸಿದೆ.

ಬೆಂಗಳೂರಿನಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದ ಸೈಯದುಲ್ ಅಖೋನ್(42) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಅರ್ಜಿದಾರ ಆರೋಪಿಯು ತನ್ನನ್ನು ಭಾರತದ ಪ್ರಜೆ ಎಂದು ಗುರುತಿಸಿಕೊಳ್ಳುವ ಸಲುವಾಗಿ ಆಧಾರ್ ಕಾರ್ಡ್ ಸೇರಿ ಹಲವು ನಕಲಿ ಗುರುತಿನ ಚೀಟಿ ಸೃಷ್ಟಿಸಿದ್ದಾನೆ ಎನ್ನಲಾಗಿದೆ. ಇಂತಹ ಕೃತ್ಯಗಳು ದೇಶದ ಭದ್ರತೆಗೆ ಅಪಾಯ ಉಂಟು ಮಾಡುವಂತಹ ದ್ದಾಗಿದೆ ಎಂದು ನ್ಯಾಯಪೀಠವು ಕಳವಳ ವ್ಯಕ್ತಪಡಿಸಿದೆ. ಆ

ರೋಪಿ ಭಾರತೀಯ ಪ್ರಜೆಯಾಗಿದ್ದು, ಉತ್ತರಪ್ರದೇಶದ ನಿವಾಸಿ ಎಂದು ತಿಳಿಸಿ, ಅದನ್ನು ಸಾಬೀತುಪಡಿಸುವ ಹಲವು ದಾಖಲೆಗಳನ್ನು ಆರೋಪಿಯ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆದರೆ, ಆರೋಪಿ ಬಾಂಗ್ಲಾದೇಶದ ಪ್ರಜೆಯಾಗಿದ್ದು, ಅಕ್ರಮವಾಗಿ ಭಾರತದೊಳಗೆ ನುಸುಳಿ, ಎರಡು ದಶಕಗಳಿಂದ ಇಲ್ಲಿಯೇ ವಾಸವಿದ್ದಾನೆ ಎನ್ನುವುದನ್ನು ತನಿಖಾಧಿಕಾರಿ ಸಲ್ಲಿಸಿರುವ ಆರೋಪಪಟ್ಟಿ ಬಹಿರಂಗಪಡಿಸಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರ ಜಾಮೀನಿಗೆ ಅರ್ಹನಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಜಾಮೀನು ಅರ್ಜಿ ವಜಾಗೊಳಿಸಿದೆ.

Similar News