ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣಗೆ ಜಾಮೀನು ನೀಡಿದ ದಿಲ್ಲಿ ಹೈಕೋರ್ಟ್

Update: 2023-02-09 07:28 GMT

ಹೊಸದಿಲ್ಲಿ: ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ದಿಲ್ಲಿ  ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ನ್ಯಾಯಾಲಯವು ಈಗಾಗಲೇ ಚಿತ್ರಾಗೆ ಜಾಮೀನು ನೀಡಿತ್ತು.

ಈ ಹಿಂದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ದಿಲ್ಲಿ ಹೈಕೋರ್ಟ್ ನ್ಯಾಯಾಧೀಶರು “ಐಸೆಕ್ - ಸೈಬರ್ ಸೆಕ್ಯುರಿಟಿ ಸಂಸ್ಥೆ - ಎನ್‌ಎಸ್‌ಇ ಉದ್ಯೋಗಿಗಳ ಫೋನ್‌ಗಳನ್ನು ಅಕ್ರಮವಾಗಿ ಟ್ಯಾಪ್ ಮಾಡುವ ಮೂಲಕ 4.54 ಕೋಟಿ ರೂಪಾಯಿ ಗಳಿಸಿದೆ'' ಎಂದು ಹೇಳಿದ್ದಾರೆ.

ಸೈಬರ್ ದೋಷಗಳ ಆವರ್ತಕ ಅಧ್ಯಯನದ ನೆಪದಲ್ಲಿ ಸಂಸ್ಥೆಯು ಎನ್‌ಎಸ್‌ಇ ಉದ್ಯೋಗಿಗಳ ಫೋನ್ ಕರೆಗಳನ್ನು ಅಕ್ರಮವಾಗಿ ತಡೆಹಿಡಿಯುತ್ತಿತ್ತು.

Similar News