×
Ad

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ: ಕೋಲಾರ ಡಿಸಿಎಫ್ ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

Update: 2023-02-10 10:45 IST

ಬೆಂಗಳೂರು, ಫೆ.10: ಕೋಲಾರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ(DCF) ಜಿ.ವೆಂಕಟೇಶ್‌ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿ, ಶೋಧ ನಡೆಸುತ್ತಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆಯೆನ್ನಲಾಗಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ವೆಂಕಟೇಶ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿರುವ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು, ವೆಂಕಟೇಶ್‌ ಮನೆ, ಕಚೇರಿ ಸೇರಿದಂತೆ ಅವರಿಗೆ ಸಂಬಂಧಿಸಿದ ಕೆಲವು ಸ್ಥಳಗಳು ಹಾಗೂ ಅವರ ನಿಕಟವರ್ತಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರು, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಅದೇರೀತಿ ಬೆಂಗಳೂರಿನ ವಿಜಯನಗರದಲ್ಲಿರುವ ಆರೋಪಿಯ ಮನೆ ಮೇಲೂ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

Similar News