ಚಿಕ್ಕಮಗಳೂರು | 25 ಎಕರೆ ಕುರುಚಲು ಕಾಡು ಬೆಂಕಿಗಾಹುತಿ
ಕಿಡಿಗೇಡಿಗಳ ಕೃತ್ಯದ ಶಂಕೆ
Update: 2023-02-10 11:10 IST
ಚಿಕ್ಕಮಗಳೂರು, ಫೆ.10: ನಗರ ಸಮೀಪದ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಸುಮಾರು 25 ಎಕರೆ ಪ್ರದೇಶದಲ್ಲಿದ್ದ ಕುರುಚಲು ಕಾಡು ಸುಟ್ಟು ಭಸ್ಮವಾಗಿದೆ. ಈ ನಡುವೆ ಬೆಂಕಿಯ ಹಿಂದೆ ಕಿಡಿಗೇಡಿಗಳ ಕೃತ್ಯದ ಶಂಕೆ ವ್ಯಕ್ತವಾಗಿದೆ.
ಚಿಕ್ಕಮಗಳೂರು ನಗರದ ಹೊರವಲಯದಲ್ಲಿರುವ ಪವಿತ್ರವನ ಸಮೀಪದ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಕಳೆದ ರಾತ್ರಿ ಹರಸಾಹಸ ಪಟ್ಡಿದ್ದು ಬೆಂಕಿಯನ್ನು ಸದ್ಯ ನಿಯಂತ್ರಿಸಲಾಗಿದೆ.
ಯಾವುದೇ ವನ್ಯಜೀವಿಗಳು ಬೆಂಕಿಗೆ ಸಿಲುಕಿ ಮೃತಪಟ್ಟಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.