×
Ad

ಉಡುಪಿ: ಆಯುಷ್ ವೈದ್ಯಾಧಿಕಾರಿಗಳಿಗೆ ಅರಿವು ಕಾರ್ಯಕ್ರಮ

Update: 2023-02-10 20:12 IST

ಉಡುಪಿ: ಆರೋಗ್ಯಇಲಾಖೆಯ ವತಿಯಿಂದ ಆಯುಷ್ ವೈದ್ಯಾಧಿಕಾರಿಗಳಿಗೆ ಸ್ಪರ್ಶ ಕುಷ್ಠರೋಗ ಅರಿವು ಕಾರ್ಯಕ್ರಮ ಇತ್ತೀಚೆಗೆ ನಗರದ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪರು ಕಾರ್ಯಕ್ರಮ ಉದ್ಘಾಟಿಸಿ ಸ್ಪರ್ಶ ಕುಷ್ಟ ರೋಗದ ಕುರಿತು ವಿಶೇಷ ಮಾಹಿತಿ ನೀಡಿದರು.

ಎಎಫ್‌ಐ ಜಿಲ್ಲಾಧ್ಯಕ್ಷ ಡಾ.ಎನ್.ಟಿ. ಅಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಡುಪ, ಡಾ.ಸತೀಶ್‌ರಾವ್, ಡಾ.ಮನೋಜ ಹಾಗೂ ಡಾ.ಸಂದೀಪ್, ಡಾ.ಸುಭಾಷ್ ಕಿಣಿ ಮತ್ತಿತರರು ಉಪಸ್ಥಿತರಿದ್ದರು.

Similar News