×
Ad

BDA ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Update: 2023-02-10 20:24 IST

ಬೆಂಗಳೂರು: ಬದಲಿ ನಿವೇಶನ ಹಂಚಿಕೆ, ಸ್ವಾಧೀನಪಡಿಸಿಕೊಂಡ ಜಮೀನುಗಳ ಮಾಲಕರಿಗೆ ಪರಿಹಾರ ವಿತರಣೆಯಲ್ಲಿ ವ್ಯಾಪಕ ಅವ್ಯವಹಾರ ನಡೆಯುತ್ತಿರುವ ದೂರುಗಳನ್ನು ಆಧರಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕೇಂದ್ರ ಕಚೇರಿ ಮೇಲೆಯೂ ಶುಕ್ರವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.

ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಹಲವು ದೂರುಗಳು ಲೋಕಾಯುಕ್ತದಲ್ಲಿ ದಾಖಲಾಗಿದ್ದು, ಹೀಗಾಗಿ, ದಿಢೀರ್ ಶೋಧ ನಡೆಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಸಂಸ್ಥೆಯ ಪೊಲೀಸ್ ವಿಭಾಗಕ್ಕೆ ನಿರ್ದೇಶನ ನೀಡಿದ್ದರು.

ಅದರಂತೆ ಕುಮಾರ ಪಾರ್ಕ್‍ನಲ್ಲಿರುವ ಬಿಡಿಎ ಕೇಂದ್ರ ಕಚೇರಿಯ ಎಲ್ಲ ಪ್ರವೇಶ ದ್ವಾರಗಳನ್ನು ಮುಚ್ಚಿ ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಎಸ್ಪಿ ಕೆ.ವಿ.ಅಶೋಕ್ ನೇತೃತ್ವದಲ್ಲಿ 35 ಅಧಿಕಾರಿಗಳು ಆರು ತಂಡಗಳಲ್ಲಿ ಕಾರ್ಯಾಚರಣೆ ನಡೆಸಿದರು. ಇನ್ನೂ, ಲೋಕಾಯುಕ್ತರು ನೀಡಿರುವ ಶೋಧನಾ ವಾರೆಂಟ್ ಆಧರಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ.

Similar News