×
Ad

ಚಿಕ್ಕಮಗಳೂರು | ಮರಕ್ಕೆ ಬೈಕ್ ಢಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು, ಸಹ ಸವಾರ ಗಂಭೀರ

Update: 2023-02-10 20:41 IST

ಚಿಕ್ಕಮಗಳೂರು, ಫೆ.10: ಬೈಕೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಗರದ ಬಾರ್ ಲೈನ್ ರಸ್ತೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಶ್ರೇಯಸ್ (22) ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರನಿಗೆ ತೀವ್ರಗಾಯವಾಗಿ ಅತನ ಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಬೈಕ್ ಮರಕ್ಕೆ ಢಿಕ್ಕಿ ಹೊಡೆಯುವ ದೃಶ್ಯ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದ್ದು, ಅತಿ ವೇಗದಲ್ಲಿ ಬೈಕ್ ಚಲಾಯಿಸಿದ ಪರಿಣಾಮ ಸವಾರನ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಢಿಕ್ಕಿ ಹೊಡೆದಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News