×
Ad

ಕಬಡ್ಡಿ ಆಡುವಾಗ ಕುಸಿದು ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

Update: 2023-02-11 10:39 IST

ಮುಂಬೈ: ಇಲ್ಲಿನ ಮಲಾಡ್‌ನಲ್ಲಿ ಆಯೋಜಿಸಲಾಗಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಕೀರ್ತಿರಾಜ್ (20) ಎಂಬ ಕಾಲೇಜು ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ ಎಂದು timesnownews.com  ವರದಿ ಮಾಡಿದೆ.

ಮಲಾಡ್ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶತಾಬ್ದಿ ಆಸ್ಪತ್ರೆಗೆ ಸಾಗಿಸಿದರು. ಸಾವಿನ ಕಾರಣ ಇನ್ನೂ ನಿಗೂಢವಾಗಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದ ನಂತರ ಹದಿಹರೆಯದವರಲ್ಲಿನ ಹೃದಯಾಘಾತ ಪ್ರಕರಣಗಳು ಆಘಾತಕಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ವೈದ್ಯಕೀಯ ತಜ್ಞರ ಕಳವಳಕ್ಕೆ ಕಾರಣವಾಗಿದೆ.

Similar News