ದಾವಣಗೆರೆ| ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ: ಮೂವರು ಮೃತ್ಯು

Update: 2023-02-11 05:37 GMT

ದಾವಣಗೆರೆ: ಅಪರಿಚಿತ ವಾಹನವೊಂದು ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಆನಗೋಡ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ರಾಮನಗರದ ನಿವಾಸಿಗಳಾದ ಪರಶುರಾಮ್ (24), ಸಂದೇಶ (23), ಶಿವು (26) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. ಕಾಟಿಹಳ್ಳಿ ಗ್ರಾಮದ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Similar News