ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
Update: 2023-02-11 15:32 IST
ಬೆಂಗಳೂರು, ಫೆ.11: ಮುಂಬರಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ರಾಜ್ಯಕ್ಕೆ ಆಗಮಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಪುತ್ತೂರು ತಾಲೂಕಿನ ಗಜಾನನ ಶಾಲೆಯ ಹೆಲಿಪ್ಯಾಡ್ ಗೆ ಆಗಮಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರು, ಶಾಸಕರು ಜೊತೆಗಿದ್ದರು.