×
Ad

ಜೈನ್ ವಿವಿ ಘಟನೆ: ವರದಿ ನೀಡುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಅಶ್ವತ್ಥನಾರಾಯಣ ಸೂಚನೆ

Update: 2023-02-12 15:26 IST

ಬೆಂಗಳೂರು: ನಗರದ ಜೈನ್ ವಿಶ್ವವಿದ್ಯಾನಿಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದಾಸ್ಪದವಾಗಿರುವ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸಿ ತಮಗೆ ವರದಿ ಸಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, "ಜೈನ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆ ದುರದೃಷ್ಟಕರ. ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿಗಳಾಗಿದ್ದಾರೆ. ಅವರನ್ನು ಇಡೀ ಜಗತ್ತೇ ಗೌರವಿಸುತ್ತಿದೆ. ಅಂಥವರನ್ನು ಅಪಮಾನಿಸಿದ್ದರೆ ಅದನ್ನು ಒಪ್ಪುವುದು ಸಾಧ್ಯವಿಲ್ಲ" ಎಂದಿದ್ದಾರೆ.

ಘಟನೆಯ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರವೇ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ಕೊಡಲಾಗಿದೆ. ಅವರು ಸದ್ಯದಲ್ಲೇ ವರದಿ ಕೊಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Similar News