ಆಸ್ಟ್ರೇಲಿಯ ವಿರುದ್ಧ ಭಾರತದ ಮೂರನೇ ಟೆಸ್ಟ್ ಪಂದ್ಯ:ಧರ್ಮಶಾಲಾದಿಂದ ಇಂದೋರ್‌ಗೆ ಸ್ಥಳಾಂತರ
Update: 2023-02-13 11:06 IST
ಹೊಸದಿಲ್ಲಿ: ಭಾರತ ಹಾಗೂ ಆಸ್ಟ್ರೇಲಿಯ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯವನ್ನು ಹಿಮಾಚಲಪ್ರದೇಶದ ಧರ್ಮಶಾಲಾದಿಂದ ಇಂದೋರ್‌ಗೆ ಸ್ಥಳಾಂತರಿಸಲಾಗಿದೆ.
ಪರ್ವತ ಪ್ರದೇಶದಲ್ಲಿ ಕಡಿಮೆ ತಾಪಮಾನದ ಕಾರಣ 3ನೇ ಟೆಸ್ಟ್ ಪಂದ್ಯವನ್ನು ಹೋಳ್ಳರ್ ಕ್ರೀಡಾಂಗಣದಲ್ಲಿ ಪಂದ್ಯವನ್ನು ಆಯೋಜಿಸಲಾಗುತ್ತದೆ ಎಂದು ಬಿಸಿಸಿಐ ಸೋಮವಾರ ಖಚಿತಪಡಿಸಿದೆ.
"ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ನಡೆಯುತ್ತಿರುವ ಆಸ್ಟ್ರೇಲಿಯ ವಿರುದ್ಧದ ಮೂರನೇ ಟೆಸ್ಟ್ ಅನ್ನು ಮೂಲತಃ ಮಾರ್ಚ್ 1 ರಿಂದ 5 ರವರೆಗೆ ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆಸಲು ನಿರ್ಧರಿಸಲಾಗಿತ್ತು, ಇದೀಗ ಇಂದೋರ್ ನ ಹೋಳ್ಕರ್ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.