ಮುಸ್ಲಿಮರಲ್ಲಿ ಶೈಕ್ಷಣಿಕ ಜಾಗೃತಿ ಗಮನಾರ್ಹ: ಡಾ.ವೈ.ಅಬ್ದುಲ್ಲ ಕುಂಞಿ
ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಮ್ಮೇಳನದಲ್ಲಿ ವೆಬ್‌ಸೈಟ್ ಅನಾವರಣ
ಮಂಗಳೂರು, ಫೆ.13: ಹಿಂದೆ ಮುಸ್ಲಿಮ್ ಸಮುದಾಯದಲ್ಲಿ ಶೈಕ್ಷಣಿಕ ಜಾಗೃತಿ ಇರಲಿಲ್ಲ. ಆದರೆ ಇಂದು ನಿರೀಕ್ಷೆಗೂ ಮೀರಿದ ಜಾಗೃತಿ ಉಂಟಾಗಿದೆ ಎಂದು ಯೆನೆಪೊಯ ಡೀಮ್ಡ್ ಟುಬಿ ಯುನಿವರ್ಸಿಟಿಯ ಕುಲಾಧಿಪತಿ ಡಾ.ವೈ.ಅಬ್ದುಲ್ಲ ಕುಂಞಿ ಹೇಳಿದ್ದಾರೆ.
ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ(Muslim Educational Institutions Federation)(ಮೀಫ್)ದ ವತಿಯಿಂದ ನಗರದ ಪುರಭವನದಲ್ಲಿ ಇಂದು ಆಯೋಜಸಿರುವ ಶೈಕ್ಷಣಿಕ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು ‘ವೆಬ್‌ಸೈಟ್' ಅನಾವರಣಗೊಳಿಸಿ ಮಾತನಾಡುತ್ತಿದ್ದರು.
ಕಾಲ ಬದಲಾಗಿದೆ. ಮುಸ್ಲಿಮರು ಶಿಕ್ಷಣದ ಮಹತ್ವ ಅರಿತುಕೊಂಡಿದ್ದಾರೆ. ನ್ಯಾಯಾಧೀಶರು, ವೈದ್ಯರು, ವಕೀಲರ ಸಹಿತ ನಾನಾ ರಂಗಗಳಲ್ಲಿ ಮುಸ್ಲಿಮರನ್ನು ಕಾಣಬಹುದಾಗಿದೆ. ಮಾಹಿತಿಯ ಕೊರತೆ ಮತ್ತು ಆರ್ಥಿಕ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕಿದೆ ಎಂದು ಡಾ.ವೈ.ಅಬ್ದುಲ್ಲ ಕುಂಞಿ ಹೇಳಿದ್ದಾರೆ.
ನಿಟ್ಟೆ ಡೀಮ್ಡ್ ಟುಬಿ ಯುನಿವರ್ಸಿಟಿಯ ಕುಲಾಧಿಪತಿ ಡಾ.ಎನ್.ವಿನಯ್ ಹೆಗ್ಡೆ ಸಮ್ಮೇಳನವನ್ನು ಉದ್ಘಾಟಿಸಿದರು.
ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಗೌರವಾಧ್ಯಕ್ಷ, ಟೀಕೇಸ್ ಗ್ರೂಪ್‌ನ ಅಧ್ಯಕ್ಷ ಉಮರ್ ಟೀಕೆ ಅಧ್ಯಕ್ಷತೆ ವಹಿಸಿದ್ದರು. ಮೀಫ್ ಗೌರವ ಸಲಹೆಗಾರ, ಬ್ಯಾರೀಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್ಸ್‌ನ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ದಿಕ್ಸೂಚಿ ಭಾಷಣ ಮಾಡಿದರು.
ಇದನ್ನೂ ಓದಿ: ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅಪಾರ: ಸೈಯದ್ ಮುಹಮ್ಮದ್ ಬ್ಯಾರಿ
ವೇದಿಕೆಯಲ್ಲಿ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್, ಸಂಪನ್ಮೂಲ ವ್ಯಕ್ತಿಗಳಾದ ಧಾರವಾಡದ ಮಹೇಶ್ ಮಸಾಲ್, ಬೆಂಗಳೂರಿನ ಸೈಯದ್ ಸುಲ್ತಾನ್ ಅಹ್ಮದ್, ಮೀಫ್ ಉಪಾಧ್ಯಕ್ಷರುಗಳಾದ ಬಿ.ಎಂ.ಮುಮ್ತಾಝ್ ಅಲಿ, ಕೆ.ಎಂ.ಮುಸ್ತಫ ಸುಳ್ಯ, ಶಬಿ ಅಹ್ಮದ್ ಖಾಝಿ, ಬಿ.ಎ.ನಝೀರ್ ಮತ್ತಿತರರು ಉಪಸ್ಥಿತರಿದ್ದರು.
ನಗರದ ಅಲ್ ಇಖ್ರಾ ಸ್ಕೂಲ್‌ನ ವಿದ್ಯಾರ್ಥಿಗಳು ಕಿರಾಅತ್ ಪಠಿಸಿದರು. ನಗರದ ಬ್ಯಾರೀಸ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಸ್ವಾಗತಿಸಿದರು.
ಇದನ್ನೂ ಓದಿ: ದ್ವೇಷ ಮುಕ್ತ ಸಮಾಜ ಕಟ್ಟೋಣ: ಡಾ.ಎನ್.ವಿನಯ್ ಹೆಗ್ಡೆ ಕರೆ