×
Ad

ಕನ್ನಡ ಚಿತ್ರರಂಗ ಗಣ್ಯರ ಭೇಟಿ ಮಾಡಿದ ಪ್ರಧಾನಿ ಮೋದಿ

Update: 2023-02-13 21:48 IST

ಬೆಂಗಳೂರು, ಫೆ. 13: ‘ಏರೋ ಇಂಡಿಯಾ-2023’ ಉದ್ಘಾಟನೆಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ಮೋದಿ ಅವರನ್ನು ನಟರಾದ ಯಶ್, ರಿಷಭ್ ಶೆಟ್ಟಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ನಿರ್ಮಾಪಕ ವಿಜಯ್ ಕಿರಂಗದೂರು ಸೇರಿದಂತೆ ಇನ್ನಿತರರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು, ಆ ಫೋಟೋಗಳು ಜಾಲತಾಣದಲ್ಲಿ ವೈರಲ್ ಆಗಿವೆ.

ರವಿವಾರ (ಫೆ.12) ರಾಜಭವನದಲ್ಲಿ ತಂಗಿದ್ದ ಪ್ರಧಾನಿ ಮೋದಿ ಅವರನ್ನು ಫೆ.13ರ ಬೆಳಗ್ಗೆ ಪ್ರಧಾನಿ ಕಚೇರಿ ಅಧಿಕಾರಿಗಳು ಮೇಲ್ಕಂಡ ಗಣ್ಯರ ಈ ಭೇಟಿಗೆ ವ್ಯವಸ್ಥೆ ಕಲ್ಪಿಸಿದ್ದು, ಈ ಬಗ್ಗೆ ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ. ಚಿತ್ರರಂಗದ ಗಣ್ಯರು ಆ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಕರ್ನಾಟಕ ಚಿತ್ರರಂಗದ ಪ್ರಮುಖರನ್ನು ಭೇಟಿಯಾದರು. ಸಂಸ್ಕಸ್ಕೃತಿ, ನವ ಭಾರತ ಮತ್ತು ಕರ್ನಾಟಕದ ಪ್ರಗತಿಗೆ ಅವರು ನೀಡಬಹುದಾದ ಕೊಡುಗೆಗಳ ಕುರಿತು ಚರ್ಚಿಸಿದರು’ ಎಂದು ಕರ್ನಾಟಕ ಬಿಜೆಪಿ ಟ್ವೀಟ್ಟರ್ ನಲ್ಲಿ ಬರೆದುಕೊಂಡಿದೆ.

Similar News