×
Ad

ಉಡುಪಿ: ಸುಪ್ರೀಂಕೋರ್ಟ್‌ನ ನೂತನ ನ್ಯಾಯಮೂರ್ತಿ ಅರವಿಂದ ಕುಮಾರ್ ಗೆ ಅಭಿನಂದನೆ

Update: 2023-02-13 21:49 IST

ಉಡುಪಿ: ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿದ್ದು, ಉಡುಪಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿರುವ ನ್ಯಾಯಮೂರ್ತಿ  ಅರವಿಂದಕುಮಾರ್ ಇದೀಗ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪದೋನ್ನತಿ ಹೊಂದಿದ ಸಂದರ್ಭದಲ್ಲಿ ಉಡುಪಿಯ  ವಕೀಲರ ಸಂಘದ ಪದಾಧಿಕಾರಿಗಳು ಅವರನ್ನು ಇಂದು ಅಭಿನಂದಿಸಿದರು.

ನ್ಯಾ.ಅರವಿಂದ ಕುಮಾರ್ ಅವರು 2021ರ ಅಕ್ಟೋಬರ್ ತಿಂಗಳಲ್ಲಿ ಗುಜರಾತ್ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಇದೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ಹೊಂದಿದ್ದಾರೆ. ಅವರಿಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಇಂದು (ಫೆ.13) ಪ್ರಮಾಣ ವಚನ ಬೋಧಿಸಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ವತಿಯಿಂದ ಅವರನ್ನು ಅಭಿನಂದಿಸಲಾಯಿತು. ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಟಿ.ವಿಜಯ ಕುಮಾರ ಶೆಟ್ಟಿ, ಹಿರಿಯ ವಕೀಲರುಗಳಾದ  ಆನಂದ ಮಡಿವಾಳ ಹಾಗೂ ರಾಘವೇಂದ್ರ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.

Similar News