ಶಿಕ್ಷಣದಿಂದ ಮಾತ್ರ ಮುಸ್ಲಿಂ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ: ಯು.ಟಿ. ಖಾದರ್

Update: 2023-02-13 16:50 GMT

ಮಂಗಳೂರು: ಶಿಕ್ಷಣದಿಂದ ಮಾತ್ರ ಮುಸ್ಲಿಂ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಹೇಳಿದ್ದಾರೆ‌.

ಮೀಫ್ ಶಿಕ್ಷಣ ಸಮ್ಮೇಳನದಲ್ಲಿ ನಡೆದ ಹಿತೈಷಿಗಳ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳ ಕಣ್ಣುಗಳು ಪ್ರಕಾಶಿಸುತ್ತಿದ್ದರೆ ಅವರಿಗೆ ಉತ್ತಮ ಭವಿಷ್ಯ ಇದೆ ಎಂದರ್ಥ. ದ್ವಿತೀಯ ಪಿಯುಸಿ ಆದ ತಕ್ಷಣ ಅವರಿಗೆ  ಮುಂದಿನ  ಶಿಕ್ಷಣದ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಮಾತನಾಡಿ, ನಮ್ಮ ರಾಜ್ಯದ ಶಿಕ್ಷಣದ ವ್ಯವಸ್ಥೆಯ ಬಗ್ಗೆ ಸಮೀಕ್ಷೆ ಮಾಡಬೇಕು ಎಂದು ಹೇಳಿದರು.

ಮೀಫ್ ಶಿಕ್ಷಣ ಸಂಸ್ಥೆಗಳ ನಡೆದು ಬಂದ‌ ಹಾದಿಯ ಸಾಕ್ಷ್ಯ ಚಿತ್ರ ಇದೇ ಸಂರ್ಭದಲ್ಲಿ ಬಿಡುಗಡೆಗೊಂಡಿತು.

ಮೀಫ್ ಅಧ್ಯಕ್ಷ ಮೂಸಬ್ಬ ಪಿ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.

ಮೀಫ್ ಗೌರವಾಧ್ಯಕ್ಷ ಉಮರ್ ಟೀಕೆ, ಗೌರವ ಸಲಹೆಗಾರ ಸೈಯದ್ ಮುಹಮ್ಮದ್ ಬ್ಯಾರಿ, ಉಪಾಧ್ಯಕ್ಷರಾದ ಕೆ.ಎಂ.ಮುಸ್ತಫ ಸುಳ್ಯ, ಶಾಬಿಹ್ ಅಹ್ಮದ್ ಖಾಝಿ, ಪ್ರಧಾನ ಕಾರ್ಯದರ್ಶಿ ಬಿ.ಎ.ನಝೀರ್  ಉಪಸ್ಥಿತರಿದ್ದರು

ಉಪಾಧ್ಯಕ್ಷ ಬಿ.ಎಂ.ಮುಮ್ತಾಝ್ ಅಲಿ ಸ್ವಾಗತಿಸಿದರು.

Similar News