ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ

Update: 2023-02-14 13:00 GMT

ಬೆಂಗಳೂರು, ಫೆ.14: ಮಾನಸಿಕ ಸಮಸ್ಯೆಯಿಂದ ಬಳಲುತಿದ್ದ ಯುವಕನೋರ್ವ ಬಹುಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಚಿರ್ (21) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.

ವಿದ್ಯಾರಣ್ಯಪುರದ ಎನ್‍ಟಿಐ ಜಂಕ್ಷನ್ ಬಳಿ ನೆಲೆಸಿದ್ದ ರಾಮಯ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಇತ್ತೀಚಿಗೆ ಮಾನಸಿಕ ಸಮಸ್ಯೆಯಿಂದ ಬಳಲುತಿದ್ದು, ಹಲವು ಬಾರಿ ಆತ್ಮಹತ್ಯೆಗೂ ಪ್ರಯತ್ನಿಸಿದ್ದ ಎನ್ನಲಾಗಿದೆ. ಮಂಗಳವಾರ ಅಪಾರ್ಟ್‍ಮೆಂಟ್‍ನ 5ನೆ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Similar News